ಉತ್ತರ ಕನ್ನಡ(16-10-2020): ನಿಯಂತ್ರಣ ತಪ್ಪಿದ ಕಾರು ಹೊಳೆಗೆ ಬಿದ್ದು ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ನಡೆದಿದೆ.
ಹುಬ್ಬಳ್ಳಿ ಮೂಲದ ಅಕ್ಷತಾ, ನಿಶ್ಚಲ್, ಸುಷ್ಮಾ ಮತ್ತು ರೋಷನ್ ಮೃತ ದುರ್ದೈವಿಗಳು.ಇವರು ಪ್ರವಾಸಕ್ಕೆಂದು ತೆರಳಿದ್ದು ಮನೆಗೆ ವಾಪಾಸ್ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ.
ಮೃತಪಟ್ಟವರ ಪೈಕಿ ಮೂವರ ಮೃತದೇಹ ದೊರೆತಿದ್ದು, ಸ್ಥಳಕ್ಕೆ ಶಿರಸಿ ಡಿವೈಎಸ್ ಪಿ ಜಿ.ಟಿ. ನಾಯಕ ಸೇರಿದಂತೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.