ಚುನಾವಣಾ ಖರ್ಚು ವೆಚ್ಚಗಳನ್ನು ಹೆಚ್ಚಿಸಿದ ಚು. ಆಯೋಗ

election comission
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬಿಹಾರ(21-10-2020): ಬಿಹಾರ ವಿಧಾನಸಭೆ ಚುನಾವಣೆ, ಲೋಕಸಭೆ, ವಿಧಾನಸಭೆ ಚುನಾವಣೆಗಳ ಅಭ್ಯರ್ಥಿಗಳ ಖರ್ಚು ಮಿತಿಯನ್ನು ಶೇ.10 ರಷ್ಟು ಹೆಚ್ಚಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

ಚುನಾವಣಾ ಆಯೋಗ‌ದ ಶಿಫಾರಸಿನ ಆಧಾರದಲ್ಲಿ ಮಿತಿಯ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್-19 ಪರಿಸ್ಥಿತಿಯಲ್ಲಿ ಅಭ್ಯರ್ಥಿಗಳಿಗೆ ಎದುರಾಗಬಹುದಾದ ತೊಂದರೆಗಳನ್ನು ಪರಿಗಣಿಸಿ ಆಯೋಗ ಖರ್ಚು-ವೆಚ್ಚಗಳ ಮಿತಿ ಹೆಚ್ಚಳಕ್ಕೆ ಶಿಫಾರಸು ಮಾಡಿದೆ.

ನೂತನ ಅಧಿಸೂಚನೆಯ ಪ್ರಕಾರ ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚಿನ ಮಿತಿಯನ್ನು 70 ಲಕ್ಷ ರೂ.ನಿಂದ 77 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದ್ದರೆ, ಸಣ್ಣ ರಾಜ್ಯಗಳಲ್ಲಿ ಈ ಮೊತ್ತವನ್ನು 54 ಲಕ್ಷ ರೂ.ಗಳಿಂದ 59 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚಿನ ಮಿತಿಯನ್ನು 28 ಲಕ್ಷಗಳಿಂದ 30.8 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು