ವಿವಾಹದ ಕನಿಷ್ಠ ವಯಸ್ಸನ್ನು ಕೇಂದ್ರವು ಶೀಘ್ರದಲ್ಲೇ ಪರಿಷ್ಕರಿಸಲಿದೆ: ಪಿಎಂ ನರೇಂದ್ರ ಮೋದಿ

pm modhi
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(16-10-2020): ಬಾಲಕಿಯರ ಕನಿಷ್ಠ ವಿವಾಹ ವಯಸ್ಸನ್ನು ಪರಿಷ್ಕರಿಸುವ ಬಗ್ಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಕಳೆದ ಆರು ವರ್ಷಗಳಲ್ಲಿ ಸರ್ಕಾರ ಕೈಗೊಂಡ ಹಲವಾರು ಪ್ರಯತ್ನಗಳಿಂದಾಗಿ ಶಿಕ್ಷಣದಲ್ಲಿ ಬಾಲಕಿಯರ ಒಟ್ಟು ದಾಖಲಾತಿ ಅನುಪಾತವು ದೇಶದಲ್ಲಿ ಮೊದಲ ಬಾರಿಗೆ ಬಾಲಕರಿಗಿಂತ ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು. ಕನಿಷ್ಠ ವಿವಾಹ ವಯಸ್ಸಿನ ಕುರಿತು ಸಮಿತಿಯಿಂದ ವರದಿಯನ್ನು ಸ್ವೀಕರಿಸಿದ ನಂತರ ಈ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್‌ಎಒ) 75 ನೇ ವಾರ್ಷಿಕೋತ್ಸವದಂದು 75 ರೂ.ಗಳ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದ ನಂತರ ವಿಡಿಯೋ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಈ ಮಾತುಗಳನ್ನಾಡಿದರು.

ಹೆಣ್ಣುಮಕ್ಕಳ ವಿವಾಹದ ಆದರ್ಶ ವಯಸ್ಸು ಯಾವುದು ಎಂದು ನಿರ್ಧರಿಸಲು ಮಹತ್ವದ ಚರ್ಚೆ ನಡೆಯುತ್ತಿದೆ.ದೇಶಾದ್ಯಂತದ ಮಹಿಳೆಯರಿಂದ ಪತ್ರಗಳನ್ನು ಸ್ವೀಕರಿಸುತ್ತಿದ್ದೇವೆ. ಸಮಿತಿಯ ವರದಿಯ ಬಳಿಕ ನಿರ್ಧಾರ ತೆಗದುಕೊಳ್ಳುತ್ತೇವೆ ಎಂದು ಪ್ರಧಾನಿ ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಅವರು ವಿವಾಹದ ಕನಿಷ್ಠ ವಯಸ್ಸು ಯಾವುದು ಎಂಬುದರ ಕುರಿತು ಸರ್ಕಾರ ಚರ್ಚಿಸುತ್ತಿದ್ದೇವೆ ಎಂದು ಘೋಷಿಸಿದ್ದರು. ಮಹಿಳೆಯರು ಮತ್ತು ಈ ವಿಷಯವನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿದ್ದಾರೆ.

ಪ್ರಸ್ತುತ, ಮದುವೆಯ ಕನಿಷ್ಠ ವಯಸ್ಸು ಮಹಿಳೆಯರಿಗೆ 18 ವರ್ಷಗಳು ಮತ್ತು ಪುರುಷರಿಗೆ 21 ವರ್ಷಗಳು. ಅಪೌಷ್ಟಿಕತೆ ವಿರುದ್ಧ ಹೋರಾಡಲು ಕಳೆದ ಆರು ವರ್ಷಗಳಲ್ಲಿ ತಮ್ಮ ಸರ್ಕಾರ ಕೈಗೊಂಡಿರುವ ಪ್ರಯತ್ನಗಳನ್ನು ಪ್ರಧಾನಿ ಮೋದಿ ಭಾಷಣದಲ್ಲಿ ಒತ್ತಿ ಹೇಳಿದರು.

ಅಪೌಷ್ಟಿಕತೆಯ ಸವಾಲನ್ನು ಎದುರಿಸಲು ತಮ್ಮ ಸರ್ಕಾರ ಸಮಗ್ರ ವಿಧಾನವನ್ನು ತೆಗೆದುಕೊಂಡಿದೆ ಎಂದು ಪ್ರಧಾನಿ ಹೇಳಿದರು. ಹೆಚ್ಚಿನ ಅಪೌಷ್ಟಿಕತೆಗೆ ಕಾರಣವಾಗಿರುವ ಎಲ್ಲ ಅಂಶಗಳ ಮೇಲೆ ಕೆಲಸ ಮಾಡಲು ಸರ್ಕಾರ ಬಹು ಆಯಾಮದ ಕಾರ್ಯತಂತ್ರವನ್ನು ಅಳವಡಿಸಿಕೊಂಡಿದೆ ಎಂದು ಅವರು ಹೇಳಿದರು.

ಸರ್ಕಾರವು ರಾಷ್ಟ್ರೀಯ ಪೌಷ್ಠಿಕಾಂಶ ಮಿಷನ್ ಅನ್ನು ಪ್ರಾರಂಭಿಸಿದೆ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ದೇಶಾದ್ಯಂತ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಿದೆ ಮತ್ತು ಕೊಳವೆಗಳ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್ ಅನ್ನು ಪ್ರಾರಂಭಿಸಿದೆ ಎಂದು ಪ್ರಧಾನಿ ಹೇಳಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು