ನವದೆಹಲಿ(29-01-2021): ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಕಲ್ಲೆಸೆತ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.. ಪ್ರತಿಭಟನಾ ಸ್ಥಳಕ್ಕೆ ಬಂದ ಸುಮಾರು 200ಜನರ ತಂಡ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ.
ಸ್ಥಳಕ್ಕೆ ಆಗಮಿಸಿದ ಗುಂಪು, ರೈತರ ಟೆಂಟ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಟೆಂಟ್ ಗಳನ್ನು ಧ್ವಂಸ ಮಾಡಲು ಪ್ರಯತ್ನಿಸಿದೆ.ಟೆಂಟ್ ಗಳ ಮೇಲೆ ದುಷ್ಕರ್ಮಿಗಳ ತಂಡ ಕಲ್ಲು ತೂರಾಟ ನಡೆಸಿದೆ. ಈ ವೇಳೆ ಅಲ್ಲೇ ನಿಂತ ಪೊಲೀಸರು ಮೂಖ ಪ್ರೇಕ್ಷಕರಾಗಿದ್ದರು ಎನ್ನಲಾಗಿದೆ.
ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಅಶ್ರುವಾಯು ಬಳಸಿದ್ದಾರೆ. ಸ್ಥಳದಲ್ಲೇ ಅಲಿಪುರ್ ಎಸ್ ಎಚ್ ಒ ಮೇಲೆ ಚೂರಿ ಇರಿತವಾಗಿದೆ ಎಂದು ವರದಿಯಾಗಿದೆ.
ಸಿಂಗು ಗಡಿಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಅಶ್ರುವಾಯುಗಳನ್ನು ಪ್ರಯೋಗಿಸಿದ್ದಾರೆ. ಸ್ಥಳೀಯರು ಎಂದು ಹೇಳಿಕೊಂಡು ಕೆಲವರು ಸ್ಥಳದಲ್ಲಿ ಪ್ರತಿಭಟನೆ ನಡೆಸಿ, ಜಾಗ ಖಾಲಿ ಮಾಡುವಂತೆ ಒತ್ತಾಯಿಸಿ ಕಲ್ಲುಗಳನ್ನು ಎಸೆದಿದ್ದಾರೆ.