1-9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಸುವ ಕುರಿತು ನಾಳೆ ಮಹತ್ವದ ಸಭೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿಗೆ ಈಗಾಗಲೇ ಸರ್ಕಾರ ಸ್ಥಗಿತಗೊಳಿಸಿದೆ. ಆದರೆ 1ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕೇ ಅಥವಾ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೇ ಎನ್ನುವ ಕುರಿತು ಪೋಷಕರಿಗೆ ಹಲವು ಗೊಂದಲ ಮೂಡಿಸಿದೆ. ಈ ಎಲ್ಲಾ ಕುರಿತಾಗಿ ಮಹತ್ವದ ನಿರ್ಧಾರ ಕೈಗೊಳ್ಳಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ (ನಾಳೆ) ಸೋಮವಾರ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕೆ ಬೇಡವೇ ಎಂಬುದರ ಬಗ್ಗೆ ತಜ್ಞರ ಜೊತೆಗೆ ಚರ್ಚೆ ನಡೆಸಲಿದ್ದಾರೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ. ಕೆಲವು ರಾಜ್ಯಗಳಲ್ಲಿ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳಿಗೆ ಪಾಸ್ ಮಾಡುವ ಬಗ್ಗೆ ಆದೇಶ ಹೊರಡಿಸಿದ್ದಾರೆ. ಕರ್ನಾಟಕದಲ್ಲಿಯೂ ಈ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ನಾಳೆ ಶಿಕ್ಷಣ ತಜ್ಞರು, ಖಾಸಗಿ ಶಾಲೆ ಸಂಘಟನೆಗಳ ಪ್ರಮುಖರು, ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯಲಿದೆ.

1 ರಿಂದ 9 ನೇ ತರಗತಿಯ ಮಕ್ಕಳಿಗೆ ಪರೀಕ್ಷೆಯ ನಡೆಸಬೇಕೇ? ಬೇಡವೇ? ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಲಿಖಿತ ಪರೀಕ್ಷೆಯ ಬದಲಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಿ ಮುಂದಿನ ತರಗತಿಗೆ ಪಾಸ್ ಮಾಡುವ ಚಿಂತನೆ ಇದ್ದು ನಾಳೆ ಮಹತ್ವದ ಸಭೆಯಾಗಿದೆ. ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಬಡ್ತಿ ನೀಡುವ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಕೂಡ ಇದೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು