ದುಂಗರಪುರ ಹಿಂಸಾಚಾರ:100 ಮಂದಿಯ ಬಂಧನ

Share on facebook
Share on twitter
Share on linkedin
Share on whatsapp
Share on telegram
Share on email
Share on print

ದುಂಗರಪುರ(04-10-2020): ದುಂಗರಪುರದಲ್ಲಿ ಹಿಂಸಾಚಾರ ಮತ್ತು ಅಗ್ನಿಸ್ಪರ್ಶಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಭಾನುವಾರದವರೆಗೆ ಸುಮಾರು 100 ಜನರನ್ನು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈ ಹಿಂದೆ ಸೆಪ್ಟೆಂಬರ್ 26 ರಂದು 759 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಬಿಚಿವಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪೊಲೀಸ್ ತಂಡಗಳು, ಸಿಸಿಟಿವಿ ದೃಶ್ಯ, ಸಾಮಾಜಿಕ ಮಾಧ್ಯಮಗಳ ವಿಡಿಯೋಗಳ ತುಣುಕನ್ನು ಆಧಾರವಾಗಿಟ್ಟುಕೊಂಡು ಬಂಧನ ನಡೆಸುತ್ತಿದೆ.

ಶಿಕ್ಷಕರ ನೇಮಕಾತಿ ಪರೀಕ್ಷೆಯ ಅಭ್ಯರ್ಥಿಗಳು ಸಾಮಾನ್ಯ ಕೋಟಾ ಸ್ಥಾನಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವಿಭಾಗದಿಂದ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು