ಬಡವರಿಗೆ 10 ಸಾವಿರ ಪರಿಹಾರ ಕೊಡಲು ನಾವೇನು ದುಡ್ಡು ಪ್ರಿಂಟ್ ಮಾಡ್ತೀವಾ? : ಸಚಿವ ಕೆ.ಎಸ್.ಈಶ್ವರಪ್ಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಶಿವಮೊಗ್ಗ: ಲಾಕ್‌ಡೌನ್‌ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕುವ ಬಡ ಕುಟುಂಬಗಳಿಗೆ 10 ಸಾವಿರ ನೆರವು ನೀಡಲು ನಾವೇನು ನೋಟ್‌ ಪ್ರಿಂಟ್ ಮಾಡ್ತಾ ಇದ್ದೇವಾ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಎಸಿ ರೂಮ್ ನಲ್ಲಿ ಕುಳಿತು ಸರ್ಕಾರದ ವಿರುದ್ಧ ಸುಮ್ಮನೆ ಟೀಕೆ ಮಾಡುವುದು ಸರಿಯಲ್ಲ. ಅವರು 14 ದಿನ ತಮ್ಮ ಬಾಯಿಗಳಿಗೆ ಬೀಗ ಹಾಕಿಕೊಂಡರೆ ಲಾಕ್‌ಡೌನ್‌ ಸಂಪೂರ್ಣ ಯಶಸ್ವಿಯಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

100 ವರ್ಷಗಳ ನಂತರ ಇಂಥ ಸಂಕಷ್ಟ ಎದುರಾಗಿದೆ, ಹೀಗೆ ಬರುವುದು ಎಂದು ಯಾರೂ ನಿರೀಕ್ಷೆ ಮಾಡಲಿಲ್ಲ. ಕೋವಿಡ್ ನಿರ್ವಹಣೆಗಾಗಿ ಸರ್ಕಾರ ಶತಪ್ರಯತ್ನ ನಡೆಸುತ್ತಿದೆ. ಎಲ್ಲದಕ್ಕೂ ವಿರೋಧಿಸುವುದು ವಿರೋಧ ಪಕ್ಷಗಳ ನಾಯಕರಿಗೆ ಶೋಭೆ ತರುವುದಿಲ್ಲ. ಬೇಕಾದರೆ ಸರ್ಕಾರಕ್ಕೆ ಏನಾದರೂ ಸಲಹೆ ಕೊಡಿ, ಅನಿವಾರ್ಯ ಕಾರಣಕ್ಕೆ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೆ ಸಿದ್ದರಾಮಯ್ಯ ಹೇಳಿದಂತೆ ₹  10 ಸಾವಿರ ಕೊಡಲು ಸಾಧ್ಯವಿಲ್ಲ ಎಂದು ಎಂದು ಕೆ‌‌.ಎಸ್‌‌‌‌.ಈಶ್ವರಪ್ಪ ಕುಟುಕಿದರು

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು