12ನೇ ತರಗತಿ ಪರೀಕ್ಷೆ ರದ್ದುಗೊಳಿಸಿ ಮಕ್ಕಳಿಗೆ ಪಾಸ್ ಮಾಡಬೇಕು : ಸಿಎಂ ಕೇಜ್ರಿವಾಲ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಕೋವಿಡ್‌ ಪಿಡುಗಿನ ಮಧ್ಯೆ 12ನೇ ತರಗತಿ ಪರೀಕ್ಷೆಗಳನ್ನು ನಡೆಸಬೇಕೇ ಎಂಬ ಕುರಿತಾಗಿ ಜೂನ್ 3ರಂದು ಕೇಂದ್ರ ಸರ್ಕಾರವು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಕೇಜ್ರಿವಾಲ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. 12ನೇ ಪರೀಕ್ಷೆಯ ಬಗ್ಗೆ ಮಕ್ಕಳಿಗೆ ಹಾಗೂ ಪೋಷಕರಿಗೆ ತುಂಬಾ ಚಿಂತೆಯಾಗಿದೆ. ಕೋವಿಡ್ ದಿಂದ ಜನತೆ ಆತಂಕದಲ್ಲಿದ್ದಾರೆ. ಹೀಗಾಗಿ ವ್ಯಾಕ್ಸಿನ್ ಇಲ್ಲದೆ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಪರೀಕ್ಷೆ ನಡೆಸಬಾರದು ಎನ್ನುವ ಇಂಗಿತ ವ್ಯಕ್ತವಾಗುತ್ತಿದೆ.

ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ಮಂಡಳಿಗಳು ನಡೆಸುವ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಹಾಗೂ ಹಿಂದಿನ ಅಂಕಗಳ
Performance ಪರಿಗಣಿಸಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಬೇಕು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕೋವಿಡ್ ಎರಡನೇ ಅಲೆಯ ಭೀತಿಯಿಂದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಮಕ್ಕಳಿಗೆ ಕೋವಿಡ್ ಭಯ ಇದೆ. ಗರಿಷ್ಠ ಪ್ರಮಾಣದ ಜನರಿಗೆ ಇನ್ನೂ ಲಸಿಕೆ ನೀಡಿಲ್ಲ. ಇಂಥ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಬೇಡ ಎಂದು ಕೇಜ್ರಿವಾಲ್ ಟ್ವೀಟ್ ಮೂಲಕ ಅಭಿಪ್ರಾಯ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು