ಕೋವಿಡ್ ಭೀತಿ : 12ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಮಧ್ಯಪ್ರದೇಶ ಸರ್ಕಾರ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಭೋಪಾಲ್: ಕೊರೊನಾ ಎರಡನೇ ಅಲೆ ತೀವ್ರತೆ ಇನ್ನೂ ಕಡಿಮೆ ಆಗಿಲ್ಲ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರವು 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ನಿನ್ನೆಯಷ್ಟೇ ಸಿಬಿಎಸ್‌ಇ 12 ನೇ ಪರೀಕ್ಷೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಈದೀಗ ಮಧ್ಯಪ್ರದೇಶ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಹಿಂದೆ ಸರ್ಕಾರ, ಪರೀಕ್ಷೆ ನಡೆಸಬೇಕೆ, ಬೇಡವೆ ಎನ್ನುವ ಚರ್ಚೆ ನಡೆದಿತ್ತು. ಮಧ್ಯಪ್ರದೇಶ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಅವ್ರು ಹೆಚ್ಚಿನ ವಿದ್ಯಾರ್ಥಿಗಳು ಮತ್ತು ಪೋಷಕರು 12ನೇ ತರಗತಿ ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಬೇಕೆಂದು ಬಯಸುತ್ತಾರೆ ಎಂದು ಹೇಳಿದ್ದರು. ಆದರೆ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸಮರ್ಪಕವಲ್ಲ ಎಂದಿದ್ದಾರೆ.

ಮಕ್ಕಳ ಅಮೂಲ್ಯ ಜೀವ ಮುಖ್ಯವಾಗಿದೆ. ಅವರ ಕೆರಿಯರ್ ಭವಿಷ್ಯ ಬಗ್ಗೆ ಆಮೇಲೆ ಯೋಚಿಸೋಣ, ಕೋವಿಡ್ ಭಯದಲ್ಲಿರುವ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ಹೇರುವುದಿಲ್ಲ. ಹೀಗಾಗಿ ಈ ಸಲದ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು