18-44 ವರ್ಷ ವಯಸ್ಸಿನವರು ಲಸಿಕೆ ಪಡೆಯಲು ಸ್ಥಳದಲ್ಲೇ ನೋಂದಣಿಗೆ ಅವಕಾಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ದೇಶದಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ಪಡೆಯಲು ಕೋವಿನ್ ವೆಬ್ ಪೋರ್ಟಲ್ ನಲ್ಲಿ ನೋಂದಣಿ ಮಾಡದೇ ಲಸಿಕೆ ಕೇಂದ್ರಕ್ಕೆ ತೆರಳಿ ಅಲ್ಲೇ ನೋಂದಣಿ ಮಾಡಲು ಅವಕಾಶ ಕಲ್ಪಿಸಿದೆ.

ಈ ಹಿಂದೆ ಅನ್ ಲೈನ್ ನೋಂದಣಿ ಮಾಡಿದವರಿಗೆ ಮೊದಲು ಅವಕಾಶ ಕಲ್ಪಿಸಿ ಬಳಿಕ ನೋಂದಣಿ ಮಾಡದೇ ಬಂದವರಿಗೆ ದಿನದ ಅಂತ್ಯದಲ್ಲಿ ಹೆಚ್ಚುವರಿಯಾಗಿ ಉಳಿದ ಲಸಿಕೆಗಳನ್ನು ಬಳಸಿಕೊಳ್ಳಲು ಅನುವು ಮಾಡಿಕೊಟ್ಟಿದೆ. ಇದರಿಂದ ಲಸಿಕೆ ಪೋಲಾಗುವುದನ್ನು ತಪ್ಪಿಸಿದಂತಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಅಂತ್ಯದ ವೇಳೆಗೆ, ಆನ್‌ಲೈನ್ ನೋಂದಣಿ ಮಾಡಿಸಿಕೊಂಡವರು ಯಾವುದೋ ಕಾರಣದಿಂದ ಹಾಜರಾಗದಿದ್ದಲ್ಲಿ ಅಂತಹ ಸಂದರ್ಭಗಳಲ್ಲಿ, ಕೆಲವರಿಗೆ ಸ್ಥಳದಲ್ಲಿಯೇ ನೋಂದಣಿ ಮಾಡಿಸಿ ಲಸಿಕೆ ವ್ಯರ್ಥವನ್ನು ಕಡಿಮೆ ಮಾಡಲು ನೀಡಬಹುದಾಗಿದೆ ”
ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವ ನಿರ್ಧಾರವನ್ನು ಆಯಾ ರಾಜ್ಯಗಳ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಟ್ಟುಬಿಡಲಾಗಿದೆ. ಹಾಗೂ ಇದು ಸರಕಾರಿ ಕೇಂದ್ರಗಳಲ್ಲಿ ಮಾತ್ರವೇ ಈ ಸೌಲಭ್ಯವಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಇರುವುದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. 45 ವರ್ಷ ದಾಟಿದವರಿಗೆ ಈಗಲೂ ಸ್ಥಳದಲ್ಲೇ ನೋಂದಣಿ ಮಾಡುವ ಅವಕಾಶ ಜಾರಿಯಲ್ಲಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು