3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸೆಮಿ ಲಾಕ್ ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷವು 200ಕ್ಕೂ ಅಧಿಕ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ 3ನೇ ಬಾರಿ ಬಂಗಾಳ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಕೋವಿಡ್ ಬಿಕ್ಕಟ್ಟು ಕಾರಣದಿಂದ ಕೋಲ್ಕತ್ತಾ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಪ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಇಂದು ನಡೆದ ಪ್ರಮಾಣವಚನ ಸಮಾರಂಭದಲ್ಲಿ ಮಮತಾ ಬ್ಯಾನರ್ಜಿ ಹೊರತಾಗಿ ಬೇರೆ ಯಾವುದೇ ಸಚಿವರು ಪ್ರಮಾಣವಚನ ಸ್ವೀಕರಿಸಿಲ್ಲ. ವಾರದ ನಂತರ ಶಾಸಕರ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಅವರು ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಖಡಕ್ ರೂಲ್ಸ್ ಜಾರಿ ಮಾಡಿದ್ದು ಸೆಮಿ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.

ಲಾಕ್ ಡೌನ್ ಜಾರಿ ಬಗ್ಗೆ ಇಂದು ಕೇಂದ್ರ ಸರ್ಕಾರದಿಂದ ಅಧಿಕೃತ ಸೂಚನೆ ಹೊರ ಬೀಳುವ ಸಾಧ್ಯತೆ ಇದ್ದು, ಇದಕ್ಕೂ ಮುನ್ನವೇ ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಸೆಮಿ ಲಾಕ್ ಡೌನ್ ಘೋಷಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಕೆಲವೇ ಸಮಯದಲ್ಲಿ ಸುದ್ದಿಗೋಷ್ಠಿ ನಡೆಸಿದ ದೀದಿ, ನಾಳೆಯಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಬರಲಿದ್ದು, ಅಗತ್ಯ ಸೇವೆ ಇರಲಿದ್ದು, ಸ್ಥಳೀಯ ರೈಲು ಸಂಚಾರ ಕೂಡ ಬಂದ್ ಆಗಲಿದೆ ಎಂದಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು