ಬೆಂಗಳೂರಿನಲ್ಲಿ ಪೊಲೀಸ್ ದೌರ್ಜನ್ಯ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(12-02-2022) : ಪೊಲೀಸರ ಕಿರುಕುಳಕ್ಕೆ ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಕೆ.ಆರ್. ಪುರಂ ಹತ್ತಿರದ ಬಸವನಪುರದಲ್ಲಿ ನಡೆದಿದೆ.
ಉಮಾ (45) ಆತ್ಮಹತ್ಯೆ ಮಾಡಿಕೊಂಡವರು.

ಉಮಾ ಎಂಬುವರು ವೈದ್ಯರೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಆ ವೈದ್ಯರ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ ಕಳ್ಳತನವಾಗಿತ್ತು. ಈ ಹಿನ್ನೆಲೆಯಲ್ಲಿ ಹಲವು ಸಲ ಠಾಣೆಗೆ ಕರೆಸಿ ಪೊಲೀಸರು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇದರಿಂದಾಗಿ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಮಹಿಳೆ, ನನ್ನ ಸಾವಿಗೆ ರಮ್ಯಾ, ರೋಹಿತ್ ಕಾರಣವೆಂದು ಹೇಳಿದ್ದಾರೆ. ಪೊಲೀಸರ ಮೇಲೆಯೂ ದೌರ್ಜನ್ಯದ ಆರೋಪ ಮಾಡಿದ್ದು, ಅಪಮಾನದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ‌.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು