ಆಮ್ ಆದ್ಮಿ ಪಾರ್ಟಿ ಸೇರಿದ ಖ್ಯಾತ ವಕೀಲ ಜಗದೀಶ್ ಮಹಾದೇವ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೆಟ್ಟು ಹೋಗಿರುವ ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸಲು ಆಮ್ ಆದ್ಮಿ ಪಕ್ಷದ ಅವಶ್ಯಕತೆ ಇದೆ. ಸದಾ ಭ್ರಷ್ಟಾಚಾರ, ಅಂತರೀಕ ಕಿತ್ತಾಟದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳಿಗೆ ಪರ್ಯಾಯವಾಗಿ ಆಮ್‌ ಆದ್ಮಿ ಪಾರ್ಟಿ(AAP)ಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಕೆ.ಎನ್‌.ಜಗದೀಶ್‌ ಮಹಾದೇವ್‌ ಹೇಳಿದ್ದಾರೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸಮಾರಂಭದಲ್ಲಿ ಎಎಪಿಗೆ ಸೇರ್ಪಡೆಗೊಂಡ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಶಕೀಲ್ ಜಗದೀಶ್‌, ಸುಮಾರು 10 ವರ್ಷಗಳಿಂದ ಒಂಟಿಯಾಗಿ ಭ್ರಷ್ಟಾಚಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತಿದ್ದೇನೆ. ನನ್ನ ಸಾಮಾಜಿಕ ಸಿದ್ಧಾಂತದ ನಿಲುವಿಗೆ ಎಎಪಿ ಪಕ್ಷ ಹೋಲಿಕೆ ಆಗುತ್ತದೆ. ರಾಜಕೀಯ ಪಕ್ಷ ಸೇರಿಕೊಂಡು ಹೋರಾಟ ನಡೆಸಿದರೆ ಮತ್ತಷ್ಟು ಬಲ ಸಿಗಬಹುದು ಎನ್ನುವ ಕಾರಣಕ್ಕೆ ಎಎಪಿ ಸೇರಿದ್ದೇನೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಜನವಿರೋಧಿ ನೀತಿ ಅನುಸರಿಸುತ್ತಿದೆ. ಈ ನಡುವೆ ಕೇಜ್ರಿವಾಲ್‌ ಆಡಳಿತದಲ್ಲಿ ಕುಡಿಯುವ ನೀರು, ವಿದ್ಯುತ್‌, ವೈದ್ಯಕೀಯ ಸೌಲಭ್ಯ ಮುಂತಾದವುಗಳು ಒಂದು ಮಿತಿಯವರೆಗೆ ಉಚಿತವಾಗಿ ನೀಡುವ ಮೂಲಕ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ. ದೇಶದಲ್ಲಿ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಬೆಲೆಯನ್ನು ಮನಬಂದಂತೆ ಹೆಚ್ಚಿಸುವ ಮೂಲಕ ಸಾಮಾನ್ಯ ಜನರನ್ನು ಹೈರಾಣಾಗಿಸುತ್ತಿರುವ ಮೋದಿ ಆಡಳಿತ ವಿರುದ್ಧ ಹೋರಾಡಲು ಯುವಜನತೆ ಮುಂದಾಗಬೇಕು. ಭ್ರಷ್ಟ ಹಾಗೂ ಕೋಮುವಾದಿ ನಾಯಕರೇ ತುಂಬಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಪ್ರತಿಜ್ಞೆ ಮಾಡಬೇಕು ಜಗದೀಶ್ ಹೇಳಿದರು.

‘ಒಳ್ಳೆಯ ಜನರು ಒಗ್ಗೂಡಿದರೆ ಸಾಮಾನ್ಯರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಬಹುದು ಎಂಬುದನ್ನು ದೆಹಲಿ ರಾಜಕೀಯವು ನಮಗೆ ತೋರಿಸಿದೆ. ದಶಕಗಳಿಂದ ನಮ್ಮ ರಾಜ್ಯದಲ್ಲಿ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ವಿವಿಧ ಸಮಸ್ಯೆಗಳು ಮತ್ತು ಅನ್ಯಾಯದ ವಿರುದ್ಧ ಪ್ರತ್ಯೇಕವಾಗಿ ಹೋರಾಡುತ್ತಿವೆ. ದೊಡ್ಡ ಪ್ರಮಾಣದ ಬದಲಾವಣೆ ತರಲು ಅಂಥವರೆಲ್ಲರೂ ಒಟ್ಟಾಗಿ ಸೇರುವ ಸಮಯ ಈಗ ಬಂದಿದೆ, ವಕೀಲ ಜಗದೀಶ್ ಅವರು ಪಕ್ಷಕ್ಕೆ ಸೇರಿದ್ದು ಕಾರಣ ಮತ್ತಷ್ಟು ಬಲಬಂದಿದೆ ಎಂದು ಎಎಪಿ (AAP) ರಾಜ್ಯ ಘಟಕದ ಸಂಚಾಲಕ ಪ್ರಥ್ವಿ ರೆಡ್ಡಿ ಹೇಳಿದರು.

ಭ್ರಷ್ಟಾಚಾರದ ವಿರುದ್ಧ, ಅನ್ಯಾಯ ಅತ್ಯಾಚಾರ, ಸೇರಿದಂತೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ಪರ ವಾದ ಮಂಡಿಸಿದ ಜಗದೀಶ್ ಮಹಾದೇವ ಅವರು ‘ವಕೀಲ್ ಸಾಬ್’ ಎಂದೇ ಖ್ಯಾತಿ ಪಡೆದಿದ್ದಾರೆ. ಅಷ್ಟೇ ಅಲ್ಲ ಸಾಮಾಜಿಕ ಕಾರ್ಯಕರ್ತರಾಗಿ ಫೇಸ್ಬುಕ್ ಲೈವ್ ಮೂಲಕ ತಮ್ಮ ಅಭಿಪ್ರಾಯಗಳನ್ನು ಜನಸಾಮಾನ್ಯರ ಮುಟ್ಟಿಸುವ ಪ್ರಯತ್ನ ಅವರು ಮಾಡುತ್ತಾರೆ.

ಈ ಸಮಾರಂಭದಲ್ಲಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ, ಮುಖಂಡರಾದ ಲಕ್ಷ್ಮೀಕಾಂತ ರಾವ್‌, ನಂಜಪ್ಪ ಕಾಳೇಗೌಡ, ಕುಶಲಸ್ವಾಮಿ, ಉಷಾ ಮೋಹನ್‌, ಬಿ.ಟಿ.ನಾಗಣ್ಣ, ಸುರೇಶ್‌ ರಾಥೋಡ್‌, ಜಗದೀಶ್‌ ವಿ. ಸದಂ ಮತ್ತಿತರರು

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು