ಕೊರೋನಾ ವೈರಸ್ ನಿಯಂತ್ರಣಕ್ಕೆ ಬಳಕೆಯಾಗುತ್ತಿದ್ದ `ಆರೋಗ್ಯ ಸೇತು’ ಆ್ಯಪ್ ಯಾರದ್ದೆಂದು ಕೇಂದ್ರ ಸರಕಾರಕ್ಕೇ ತಿಳಿದಿಲ್ಲವಂತೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೊಸದೆಹಲಿ(28/10/2020):  ‘ಆರೋಗ್ಯ ಸೇತು’ ಆ್ಯಪ್ ಸೃಷ್ಟಿಸಿದ್ದು ಯಾರು ಎಂಬ ಬಗ್ಗೆ ಕೇಂದ್ರ ಸರ್ಕಾರಕ್ಕೇ ಮಾಹಿತಿ ಇಲ್ಲವಂತೆ! ಈ ವಿಚಾರ ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದವರು ಯಾರು ಎಂಬ ಆರ್ ಟಿಐ ಪ್ರಶ್ನೆಗೆ ಕೇಂದ್ರ ಸರಕಾರ ನೀಡಿದ ಉತ್ತರದಿಂದ ತಿಳಿದು ಬಂದಿದೆ. ಈ ಆ್ಯಪ್ ಅನ್ನು ಮಹಾ ಮಾರಿ ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸಲು ವಿನ್ಯಾಸಗೊಳಿಸಲಾಗಿತ್ತು.

ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಕೇಂದ್ರ ಮಾಹಿತಿ ಆಯೋಗ ನೋಟಿಸ್‌ ನೀಡಿದೆ. “ಆ್ಯಪ್ ಅನ್ನು ಯಾರು ಸೃಷ್ಟಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಕಡತಗಳು ಎಲ್ಲಿವೆ ಎಂಬುದನ್ನು ವಿವರಿಸಲು ಮುಖ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಇದು ಹಾಸ್ಯಾಸ್ಪದ,” ಎಂದಿರುವ ಆಯೋಗ, ನವೆಂಬರ್‌ 24 ರಂದು ತನ್ನ ಮುಂದೆ ಹಾಜರಾಗುವಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದೆ.

 ಆರೋಗ್ಯ ಸೇತು ವೆಬ್‌ಸೈಟ್‌ ಅನ್ನು ಸಚಿವಾಲಯಗಳ ವೆಬ್‌ಸೈಟ್‌ಗಳನ್ನು ಅಭಿವೃದ್ಧಿಪಡಿಸುವ ‘ನ್ಯಾಷನಲ್‌ ಇನ್ಫಾರ್ಮೆಟಿಕ್ಸ್‌ ಸೆಂಟರ್‌’(ಎನ್‌ಐಸಿ) ಅಭಿವೃದ್ಧಿಪಡಿಸಿದೆ ಎಂದು ಆ್ಯಪ್ ನಲ್ಲೇ ಮಾಹಿತಿ ಇದೆ. ಆದರೆ ಈ ಕುರಿತು ಮಾಹಿತಿ ಹಕ್ಕು ಅಡಿಯಲ್ಲಿ ಮಾಹಿತಿ ಕೇಳಿದಾಗ `ನಮಗೆ ತಿಳಿದಿಲ್ಲ’ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಹಾಗೂ ಎನ್‌ಐಸಿ ಉತ್ತರಿಸಿದೆ ಎಂದು ವರದಿಯಾಗಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು