ಯುಎಇ: ಕೊರೋನ ವಿಚಾರದಲ್ಲಿ ಸುಳ್ಳು ಸುದ್ದಿ ಬಿತ್ತರಿಸಿದ ಪತ್ರಕರ್ತನಿಗೆ ಎರಡು ವರ್ಷ ಜೈಲು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಅಬುಧಾಬಿ(5-11–2020): ಕೊರೋನಾ ವಿಚಾರವಾಗಿ ಸುಳ್ಳು ಸುದ್ದಿಗಳನ್ನು ಬಿತ್ತರಿಸಿದ ಪತ್ರಕರ್ತನಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಕೊರೋನಾ ತಗುಲಿ ಒಂದೇ ಕುಟುಂಬದ ಐದು ಮಂದಿ ಸಾವಿಗೀಡಾಗಿದ್ದಾರೆ ಎಂದು ಈತ ವರದಿ ಮಾಡಿದ್ದ. ಅಬುಧಾಬಿ ಸ್ಪೋರ್ಟ್ಸ್ ಚಾನಲಿನ ವರದಿಗಾರನಾಗಿದ್ದ ಈತ ಯುಎಇಯ ಒಂದು ಕುಟುಂಬದ ಬಗೆಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ. ಅಬುಧಾಬಿಯ ಪೆಡರಲ್ ನ್ಯಾಯಾಲಯವು ಇದೀಗ ಆತನಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಇಂತಹ ಸುಳ್ಳು ಸುದ್ದಿಗಳು ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಕೊರೋನಾ ಕುರಿತಂತೆ ಭಯ ಮತ್ತು ಗೊಂದಲದ ವಾತಾವರಣ ಉಂಟುಮಾಡುತ್ತದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು