ಬೆಂಗಳೂರು(07-11-2020): ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ಮನೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಚಿನ್ನಾಭರಣಗಳನ್ನು ಕಂಡು ದಂಗಾಗಿದ್ದಾರೆ.
ಡಾ.ಬಿ.ಸುಧಾ ನಿವಾಸದಲ್ಲಿ ಅಪಾರ ಪ್ರಮಾಣದಲ್ಲಿ ಚಿನ್ನಾಭರಣ, ಆಸ್ತಿ ಪತ್ರಗಳು ಪತ್ತೆಯಾಗಿವೆ.ಬೆಂಗಳೂರಿನ ಕೋಡಿಹಳ್ಳಿಯಲ್ಲಿರುವ ಸುಧಾ ನಿವಾಸದಲ್ಲಿ ಕೆಜಿಗಟ್ಟಲೆ ಚಿನ್ನ, 10 ಲಕ್ಷ ರೂ. ನಗದು ಹಾಗೂ ದಾಖಲೆ ಪತ್ರಗಳು ಪತ್ತೆಯಾಗಿದೆ.
ಸುಧಾ ಅವರ ಯಲಹಂಕದ ಫ್ಲಾಟ್, ಬ್ಯಾಟರಾಯನಪುರ, ಬಿಇಎಂಎಲ್ ಮನೆ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಡಾ.ಸುಧಾ, ಈ ಹಿಂದೆ ಬಿಡಿಎಯಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದರು. ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರ ಆರೋಪ ಕೇಳಿಬಂದಿತ್ತು.