ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ

accident
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹಾಸನ(21-02-2021): ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಟಾಟಾ ಸುಮೋಗೆ ಕ್ವಾಲಿಸ್ ಢಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯ ಶಾಂತಿಗ್ರಾಮದ ಹತ್ತಿರ ಕೆಂಚಟ್ಟಹಳ್ಳಿ ಬಳಿ ಟಾಟಾಸುಮೋಗೆ ಹಿಂದಿನಿಂದ ಬಂದ ಕ್ವಾಲಿಸ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹಾಸನದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು