ರಾಯಚೂರು (11-11-2020): ಭೀಕರ ರಸ್ತೆ ಅಪಘಾತದಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ರಾಯಚೂರಿನ ಮಂಜರ್ಲ ಬಳಿ ನಡೆದಿದೆ.
ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ದುರಂತ ಸಂಭವಿಸಿದ್ದು. ಅಭಿಷೇಕ್, ಬಸವರಾಜ್, ಗಣೇಶ್ ಮೃತ ದುರ್ದೈವಿಗಳು. ಇವರು ರಾಯಚೂರಿನ ನವೋದಯ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದರು.
ಅಪಘಾತದ ತೀವ್ರತೆಗೆ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಈ ಕುರಿತು ಯರಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.