ಸರಣಿ ಅಪಘಾತಕ್ಕೆ ಇಬ್ಬರು ದುರ್ಮರಣ, ಮಕ್ಕಳು ಸೇರಿ ಹಲವರು ಗಂಭೀರ

accident
Share on facebook
Share on twitter
Share on linkedin
Share on whatsapp
Share on telegram
Share on email
Share on print

ಚಿತ್ರದುರ್ಗ(14-11-2020): ಸರಣಿ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಲತಾ(28) ಮತ್ತ ಶಶಿಕುಮಾರ್(26)  ಮೃತ ದುರ್ದೈವಿಗಳು.

ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಸಮೀಪ ಗ್ರೀನ್ ಲ್ಯಾಂಡ್ ಹೋಟೆಲ್ ಹತ್ತಿರದ ರಾಷ್ಟ್ರೀಯ ಹೆದ್ದಾರಿ -4 ರಲ್ಲಿ ಬಸ್, ಇಂಡಿಕಾ ಕಾರು, ಮಾರುತಿ ಓಮ್ನಿ ಕಾರು ಹಾಗೂ ಕ್ಯಾಂಟರ್ ವಾಹನ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 5ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನಿಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಈ ಕುರಿತು ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು