ಮಹಾರಾಷ್ಟ್ರ(15-02-2021): ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಟ್ರಕ್ ಪಲ್ಟಿಯಾಗಿ ಹದಿನಾರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಕಿಂಗ್ವಾನ್ ಗ್ರಾಮದ ದೇವಾಲಯದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟವರೆಲ್ಲರೂ ಜಿಲ್ಲೆಯ ಅಭೋದಾ, ಕೆರ್ಹಾಲಾ ಮತ್ತು ರಾವರ್ನ ಕಾರ್ಮಿಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಗ್ರಾಮೀಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯ ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.