ಉತ್ತರ ಪ್ರದೇಶ(02-03-2021): ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ 6ಮಂದಿ ಕಾರ್ಮಿಕರು ಮೃತಪಟ್ಟು, 16ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ದುರಂತ ಘಟನೆ ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ಅತಿ ವೇಗವಾಗಿ ಚಲಿಸುತ್ತಿದ್ದ ಲಾರಿ ಭೋಗ್ನಿಪೂರ್ ಕೊಟ್ವಾಲಿ ಬಳಿ ಹೆದ್ದಾರಿಯಲ್ಲಿ ಉರುಳಿ ಬಿದ್ದಿದೆ. ಈ ವೇಳೆ ಕಾರ್ಮಿಕರು ಲಾರಿ ಅಡಿಯಲ್ಲಿ ಸಿಲುಕಿದ್ದಾರೆ. ಗಾಯಗೊಂಡ 16 ಮಂದಿಯಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಕಾರ್ಮಿಕರು ಹತೀರ್ ಪುರ ಜಿಲ್ಲೆಯ ನಿವಾಸಿಗಳಾಗಿದ್ದು ಇಟವಾದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ಕುರಿತು ಭೋಗ್ನಿಪುರ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.