ಚಂಡೀಗಡ್ : ರೈತರ ಬೇಡಿಕೆ ಮತ್ತು ಪ್ರತಿಭಟನೆಯನ್ನು ನಿರಾಕರಿಸುತ್ತಿರುವ ಕೇಂದ್ರ ಸರಕಾರದ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಮತ್ತೊಮ್ಮೆ ಚಾಟಿ ಬೀಸಿದ್ದಾರೆ.
“ರೈತರೊಂದಿಗೆ ಚರ್ಚಿಸಿ,ಶಾಂತಿ ಸಭೆ ಮಾಡುವ ಮೂಲಕ ಅವರ ಸಮಸ್ಯೆಗೆ ಸ್ಪಂದನೆ ಕೊಡಬೇಕು.ಅವರೊಂದಿಗೆ ಮಾತುಗಾರಿಕೆ ನಡೆಸಿ,ಅವರಿಗೆ ಅನುಕೂಲಕರವಾದ ಹೊಸ ಕೃಷಿ ಕಾಯ್ದೆಗಳನ್ನು ರಚಿಸಿ.ನಿಮ್ಮ ಅಹಂಕಾರವನ್ನು ಬದಿಗಿಟ್ಟು ಕೂಡಲೇ ಈ ವಿವಾದಾತ್ಮಕ ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕು” ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರವರು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಸರಕಾರವು ಇದನ್ನು ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಳ್ಳುವುದರಿಂದ ಏನು ಪ್ರಯೋಜನ? ಅಲ್ಲಿ ರೈತರೊಂದಿಗೆ ವೃದ್ಧರು,ಮಹಿಳೆಯರು ಮತ್ತು ಮಕ್ಕಳು ಕೂಡ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.ಈ ಕೂಡಲೇ ಅವರಿಗೆ ಸ್ಪಂದಿಸಬೇಕು ಎಂದು ಹೇಳಿದರು.