ನವದೆಹಲಿ(25-11-2020): ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್(71) ಇಂದು ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 1 ತಿಂಗಳ ಮೊದಲು ಕೋವಿಡ್ ಸೋಂಕು ಕೂಡ ತಗುಲಿತ್ತು.
ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಅಹ್ಮದ್ ಪಟೇಲ್ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಾರ್ವಜನಿಕ ಜೀವನದಲ್ಲಿ ಅವರ ಸೇವೆ ಅವಿಸ್ಮರಣೀಯ, ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರ ಸ್ಮರಣೀಯವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.