ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ahmad patel
Share on facebook
Share on twitter
Share on linkedin
Share on whatsapp
Share on telegram
Share on email
Share on print

ಗುರುಗ್ರಾಮ್(16-11-2020): ಕಾಂಗ್ರೆಸ್ ನ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಗುರುಗ್ರಾಮ್ ನ ಮೆಡಂತ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿದೆ.

ಅಕ್ಟೋಬರ್ 1 ರಂದು ಅಹ್ಮದ್ ಪಟೇಲ್ ಕರೋನವೈರಸ್ ಗೆ ಧನಾತ್ಮಕ ಪರೀಕ್ಷೆ ಮಾಡಿಸಿದ್ದರು. ಆ ಬಳಿಕ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ.

ಇನ್ನು ಅಹ್ಮದ್ ಪಟೇಲ್ ಶೀಘ್ರ ಚೇತರಿಕೆಗೆ ಆನಂದ್ ಶರ್ಮಾ ಮತ್ತು ಶಶಿ ತರೂರ್ ಸೇರಿದಂತೆ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಹಾರೈಸಿದ್ದಾರೆ.

ನನ್ನ ಸ್ನೇಹಿತ ಮತ್ತು ಒಡನಾಡಿ ಅಹ್ಮದ್ ಪಟೇಲ್ ಅವರ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಆನಂದ್ ಶರ್ಮಾ ಟ್ವೀಟ್ ಮಾಡಿದ್ದಾರೆ.

ಶಶಿ ತರೂರ್ ಟ್ವೀಟ್ ಮಾಡಿ, ಶ್ರೀ ಪಟೇಲ್ ಅವರನ್ನು ಭಾರತದ ರಾಜಕೀಯದಲ್ಲಿ ಅಸಾಧಾರಣ ವ್ಯಕ್ತಿ ಎಂದು ಬಣ್ಣಿಸಿದ್ದು, ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು