ಮುಂಬೈ (18-11-2020): ನಿಪ್ಪಾಣಿ, ಕಾರವಾರ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಕೊಟ್ಟಿದ್ದು, ಕನ್ನಡಿಗರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಬಾಳಾಠಾಕ್ರೆ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಜಿತ್ ಪವಾರ್, ನಿಪ್ಪಾಣಿ, ಬೆಳಗಾವಿ, ಕಾರವಾರ, ಮಹಾರಾಷ್ಟ್ರಕ್ಕೆ ಸೇರಬೇಕು. ಅಖಂಡ ಮಹಾರಾಷ್ಟ್ರ ನಿರ್ಮಾಣ ಬಾಳಾ ಠಾಕ್ರೆ ಕನಸಾಗಿತ್ತು. ಇದನ್ನು ನನಸು ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ಮಹಾರಾಷ್ಟ್ರ ಡಿಸಿಎಂ ಈ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನೊಂದು ಕಡೆ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿದೆ. ಡಿ.5ಕ್ಕೆ ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ಕೊಟ್ಟಿದ್ದಾರೆ.