ಅಜ್ಜಿಗೆ ಅರಿವೆ ಚಿಂತೆ, ಮೊಮ್ಮಗಳಿಗೆ ಡಾಬಿನ ಚಿಂತೆ: ಅರುಣ್ ಸಿಂಗ್ ರಾಜ್ಯ ಭೇಟಿಗೆ ಕಾಂಗ್ರೆಸ್ ಟೀಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: “ಅಜ್ಜಿಗೆ ಅರಿವೆ ಚಿಂತೆ, ಮೊಮ್ಮಗಳಿಗೆ ಡಾಬಿನ ಚಿಂತೆ” ಎನ್ನುವಂತೆ ರಾಜ್ಯದ ಜನತೆಗೆ ಬದುಕಿನ ಚಿಂತೆ, ಬಿಜೆಪಿಗೆ ಕುರ್ಚಿ ಕದನದ ಚಿಂತೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆಯ ಬಿರುಗಾಳಿ ಯನ್ನು ಶಮನಗೊಳಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡುವುದಕ್ಕೆ ಅಪಹಾಸ್ಯ ಮಾಡಿದ ಕಾಂಗ್ರೆಸ್ ಟ್ವೀಟ್ ಮೂಲಕ ಅರುಣ್ ಸಿಂಗ್ ಅವರಿಗೆ ಲೇವಡಿ ಮಾಡಿದೆ.

ಒಂದು ಕಡೆ ಸಹಿ ಸಂಗ್ರಹಿಸುವವರು, ಮತ್ತೊಂದು ಕಡೆ ಪತ್ರ ಬರೆಯುವವರು, ಇನ್ನೊಂದು ಕಡೆ ಆ’ಸಂತೋಷಗೊಂಡವರು! ಎಂದಿಗೂ ಜನಪರವಾಗಿರದ ಬಿಜೆಪಿಗೆ ಅಧಿಕಾರ ಸಿಗುವುದು ರಾಜ್ಯಕ್ಕೆ ‘ಶಾಪ’ ತಟ್ಟಿದಂತೆ! ಎಂದು ಆರೋಪಿಸಿದೆ.

ಬೆಲೆ ಏರಿಕೆಗೆ -ಮೌನ, ನೆರೆ ಪರಿಹಾರಕ್ಕೆ – ಮೌನ
ಆಕ್ಸಿಜನ್ ಕೇಳಿದಾಗ – ಮೌನ, ರೆಮಿಡಿಸಿವಿರ್ ಕೇಳಿದಾಗ – ಮೌನ, ಜಿಎಸ್‌ಟಿ ಬಾಕಿ ಕೇಳಿದಾಗ – ಮೌನ, ಅಂಪೊಟರಿಸನ್ ಕೇಳಿದಾಗ – ಮೌನ
ಜನರ ವಿಷಯಗಳಿಗೆ ಮೌನ ವಹಿಸುವ ಬಿಜೆಪಿ ರಾಷ್ಟ್ರ ನಾಯಕರು ಕುರ್ಚಿ ಕಲಹ ನಿರ್ವಹಿಸಲು ಮಾತ್ರ ಗಡಿಬಿಡಿಯಲ್ಲಿ ಓಡೋಡಿ ಬರುತ್ತಾರೆ! ಬಿಜೆಪಿ ಆದ್ಯತೆ ಜನತೆಯಲ್ಲ, ಅಧಿಕಾರ ಎಂದು ದೂರಿದೆ.

‘ಅರುಣ್ ಸಿಂಗ್ ಅವರೇ, ‘ಕಟ್ಟೆ ಪಂಚಾಯ್ತಿ’ ನಡೆಸಲು ಓಡೋಡಿ ಬರುವ ತಾವು, ಜನರ ಸಮಸ್ಯೆಗಳ ಬಗ್ಗೆ ಚಿಂತನೆ ನಡೆಸಲು ಸಮಯವಿಲ್ಲವೇ? ಈ ಗತಿಗೆಟ್ಟ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಆಂತರಿಕ ಕಿತ್ತಾಟಗಳೇ ಸುದ್ದಿ ಮಾಡುತ್ತಿವೆ ಹೊರತು ಸಾಧನೆಗಳಲ್ಲ. ಈ ದುರಾಡಳಿತದ ಬಗ್ಗೆ ತಮಗೆ ಕನಿಷ್ಠ ವಿಷಾದ, ನಾಚಿಕೆ ಯಾವುದೂ ಇಲ್ಲವೇ? ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು