ಅಲಹಾಬಾದ್(31-10-2020): ವಿವಾಹಕ್ಕಾಗಿ ಮತಾಂತರ ಸ್ವೀಕಾರಾರ್ಹವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.
ಅಂತರ್ ಧರ್ಮೀಯ ವಿವಾಹ ಮಾಡಿಕೊಂಡ ದಂಪತಿಗಳು ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.
ನ್ಯಾಯಮೂರ್ತಿ ಮಹೇಶ್ ಚಂದ್ರ ತ್ರಿಪಾಠಿ, ಅರ್ಜಿ ವಿಚಾರಣೆ ನಡೆಸಿ, ಮುಸ್ಲಿಂ ಮಹಿಳೆ ಮದುವೆಗೆ ಒಂದು ತಿಂಗಳ ಮೊದಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಇದರಿಂದ ಮದುವೆಗಾಗಿ ಮತಾಂತರ ಆಗಿರುವುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಹೇಳಿದ್ದಾರೆ.
2014 ರಲ್ಲಿ ನಡೆದ ಇಂತಹದೇ ಮತ್ತೊಂದು ಪ್ರಕರಣವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.