ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಟ್ರಂಪ್ –ಬಿಡೆನ್ ನಡುವೆ ಭಾರೀ ಫೈಟ್| ಫಲಿತಾಂಶದ ಬಳಿಕ ಭಾರೀ ಹಿಂಸಾಚಾರ ನಡೆಯುತ್ತದೆ ಎಂದ ಟ್ರಂಪ್!

america election
Share on facebook
Share on twitter
Share on linkedin
Share on whatsapp
Share on telegram
Share on email
Share on print

ವಾಷಿಂಗ್ಟನ್‌ (04-11-2020): ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಮಧ್ಯೆ ಚುನಾವಣೆ ಫ‌ಲಿತಾಂಶದ ಬಳಿಕ ಭಾರೀ ಹಿಂಸಾಚಾರ ಉಂಟಾಗಬಹುದು ಎಂದು ಅಮೆರಿಕಾ ಅಧ್ಯಕ್ಷ, ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಐದು ಮತಗಳನ್ನು ಪಡೆದು ಪಶ್ಚಿಮ ವರ್ಜೀನಿಯಾದಲ್ಲಿ ಗೆಲುವಿನತ್ತ ಸಾಗಿದ್ದಾರೆ. ರಿಪಬ್ಲಿಕನ್ ಅಭ್ಯರ್ಥಿ ಜೋ ಬಿಡೆನ್ ಅವರನ್ನು ಪಶ್ಚಿಮ ವರ್ಜೀನಿಯಾದಲ್ಲಿ  ಟ್ರಂಪ್ ಸೋಲಿಸಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆಂಟುಕಿ, ಇಂಡಿಯಾನಾ, ಸೌಥ್ ಕರೋಲಿನಾ ದಲ್ಲಿ ಜಯಗಳಿಸಿದ್ದಾರೆ. ಜೋ ಬೈಡನ್ ಅವರು ಟೆಕ್ಸಾಸ್, ಜಾರ್ಜಿಯಾ, ಫ್ಲೋರಿಡಾ, ಹ್ಯಾಂಪ್ ಶೈರ್, ವರ್ಮೊಂಟ್ ವಶಪಡಿಸಿಕೊಂಡಿದ್ದಾರೆ.

ಇನ್ನು ಟ್ರಂಪ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಶ್ವೇತ ಭವನ, ಪೆಂಟಗಾನ್‌ ಮತ್ತು ಇತರ ಉದ್ಯಮ ಸಂಸ್ಥೆಯ ಕಚೇರಿಗಳಿಗೆ ಗರಿಷ್ಠ ಭದ್ರತೆ ಕಲ್ಪಿಸಲಾಗಿದೆ.

ನ್ಯೂಯಾರ್ಕ್‌ ಸಿಟಿಯ ಮೇಯರ್‌ ಬಿಲ್‌ ಡೆ ಬ್ಲಾಸಿಯೋ ಮಾತನಾಡಿ, ಫ‌ಲಿತಾಂಶದ ಅನಂತರ ಹಿಂಸಾತ್ಮಕ ಘಟನೆಗಳ ಬಗ್ಗೆ ಮಾಹಿತಿ ಇಲ್ಲ. ಆದರೂ ಪರಿಸ್ಥಿತಿ ಕೈಮೀರದಂತೆ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು