ಅನೈತಿಕ ಪೊಲೀಸ್ ಗಿರಿಗೆ ಸಮರ್ಥಿಸುವ ಮುಖ್ಯಮಂತ್ರಿಗಳೇ ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ : ಸಿದ್ದರಾಮಯ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿಯವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅನೈತಿಕ ಪೋಲೀಸ್ ಗಿರಿಗೆ ಕುರಿತು ಸಮರ್ಥನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಅನೈತಿಕ ಪೊಲೀಸ್ ಗಿರಿಗೆ ಬಲಿಯಾಗುತ್ತಿರುವವರು ಅಸಹಾಯಕ, ಅಮಾಯಕ ಹೆಣ್ಣುಮಕ್ಕಳು. ಸ್ತ್ರಿಪೀಡಕರ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಬೇಕಾದ ನೀವು ಅದನ್ನು ಮಾಡದೆ ಆ ದುಷ್ಕರ್ಮಿಗಳ ರಕ್ಷಣೆಗೆ ನಿಂತಿದ್ದೀರಿ. ಕುರ್ಚಿಯ ರಕ್ಷಣೆಗಾಗಿ ಸಂಘ ಪರಿವಾರದ ಓಲೈಕೆ ನಿಮಗೆ ಅನಿವಾರ್ಯವಾಗಿರಬಹುದು. ಇದಕ್ಕಾಗಿ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿಯುವುದೇ? ಎಂದು ಆಕ್ಷೇಪಿಸಿದರು.

ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ, ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ,ಉತ್ತೇಜನ ಮತ್ತು ರಕ್ಷಣೆ ನೀಡುವ ನಿಮ್ಮದು ಎಂದು ತಿಳಿದುಕೊಳ್ಳಬಹುದೇ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.

ಆ್ಯಕ್ಷನ್ ಗೆ ರಿಯಾಕ್ಷನ್ ಇರುತ್ತೆ ಎಂದು ಹೇಳುವ ಮೂಲಕ ಯಾವ ಕಾಡಿನ ನ್ಯಾಯವನ್ನು ಪಾಠ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ.? ಪೊಲೀಸ್ ಇಲಾಖೆಯನ್ನು ರದ್ದು ಮಾಡಿ ನಿಮ್ಮ ಪರಿವಾರಕ್ಕೆ ಕಾನೂನು ಪಾಲನೆಯ ಕೆಲಸವನ್ನು ವಹಿಸಿಕೊಡುವ ದುಷ್ಟ ಉದ್ದೇಶವೇನಾದರೂ ನಿಮಗಿದೆಯೇ?

ನಿಮ್ಮ ಆರೋಗ್ಯ ಸಚಿವರು ಇತ್ತೀಚೆಗೆ ಹೆಣ್ಣುಮಕ್ಕಳ ಬದುಕುವ ಸ್ವಾತಂತ್ರ್ಯವನ್ನು ಪ್ರಶ್ನಿಸಿ ಅವಮಾನ ಮಾಡಿದ್ದರು, ಇದೀಗ ನೀವು ಮಹಿಳೆಯರ ಮೆಲೆ ದೌರ್ಜನ್ಯ ನಡೆಸುತ್ತಿರುವವರ ರಕ್ಷಣೆಗೆ ಇಳಿದಿದ್ದೀರಿ. ನಿಮ್ಮ ಸರ್ಕಾರದ ನಿಷ್ಠೆ ಸಂವಿಧಾನಕ್ಕೋ? ಮನುಸ್ಮೃತಿಗೋ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು