ಎಪ್ರಿಲ್ 20 ತನಕ ನೈಟ್ ಕರ್ಫ್ಯೂ ಮುಂದುವರಿಕೆ, ಬೇರೆ ಬದಲಾವಣೆ ಇಲ್ಲ : ಸಿಎಂ ಬಿಎಸ್ ವೈ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ದೆಹಲಿ, ಮಹಾರಾಷ್ಟ್ರ ದಲ್ಲಿ ಜನತಾ ಕರ್ಫ್ಯೂ ವೀಕೆಂಡ್ ಲಾಕ್ ಡೌನ್ ಹೇರಲಾಗಿದ್ದು, ಕೊರೊನಾ ತಡೆಗಟ್ಟಲು ಹಲವು ನಿರ್ಬಂಧಗಳನ್ನು ಜಾರಿಗೊಳಿಸಿವೆ. ರಾಜ್ಯದಲ್ಲಿ ಕೂಡ ಪ್ರತಿದಿನ ಸಾವಿರಾರು ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತುರ್ತು ಸಭೆ ಕರೆದಿದ್ದರು.

ಕೊರೊನಾ ಮಾಹಾಮಾರಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಿತಿ ಮೀರಿ ಸಂಖ್ಯೆ ಹೆಚ್ಚಾಗುತ್ತಿದೆ, ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9.30 ಕ್ಕೆ ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸಭೆ ನಡೆಸಿ, ಸಭೆಯಲ್ಲಿ ಹಿರಿಯ ಅಧಿಕಾರಿಗಳು, ಸಚಿವರ ಸಮ್ಮುಖದಲ್ಲಿ ಚರ್ಚೆ ನಡೆಸಿದ್ದೇವೆ. ಜನತಾ ಕರ್ಫ್ಯೂ , ಲಾಕ್ ಡೌನ್ , ನೈಟ್ ಕರ್ಫ್ಯೂ ಸೇರಿದಂತೆ ಯಾವುದೇ ಕುರಿತು ಚಿಂತನೆ ನಡೆಸಿಲ್ಲ, 20ನೇ ತಾರೀಖು ವರೆಗೆ ಯಾವುದೇ ನಿರ್ಬಂಧಗಳನ್ನು ಬದಲಾವಣೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ತುರ್ತು ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಚರ್ಚೆ ಆಗಿದೆ ಹೊರತು ಸಭೆಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಿಎಂ ತಿಳಿಸಿದ್ದಾರೆ. ಈ ಹಿಂದೆ ಹೇರಿದ ನೈಟ್ ಕರ್ಫ್ಯೂ 20ರ ವರೆಗೆ ಹಾಗೇ ಮುಂದುವರಿಯುತ್ತದೆ, ಎಪ್ರಿಲ್20 ನಂತರ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ಬೇರೆ ರಾಜ್ಯಗಳಿಗೆ ಹೋಲಿಕೆ ಬೇಡ, ನಮ್ಮದೇ ಆದ ಕೆಲವು ಕಾರಣಗಳಿವೆ ಎಂದೂ ಸಿಎಂ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು