ಅರ್ಚಕರಿಗೆ, ಸಿಬ್ಬಂದಿಗೆ 6ನೇ ವೇತನ ಶ್ರೇಣಿ, ಆರೋಗ್ಯ ವಿಮೆ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ : ಸಚಿವೆ ಶಶಿಕಲಾ ಜೊಲ್ಲೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದೆ.

ಇಂದು ವಿಕಾಸಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ನಮ್ಮ ಮುಜರಾಯಿ ಇಲಾಖೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಹಾಗೂ ವಿಶೇಷ ಯೋಜನೆಗಳನ್ನು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಘೋಷಣೆ ಮಾಡಿದರು.

ಮುಜರಾಯಿ ಇಲಾಖೆಯ ಎ ಮತ್ತು ಬಿ ಅಧಿಸೂಚಿತ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇ ವೇತನ ಶ್ರೇಣಿ ಸೌಲಭ್ಯ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 6 ನೇ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ 01-10-2021 ರಿಂದ ಜಾರಿಗೆ ತರಲಾಗಿದೆ.

ಶೇ35%ರಷ್ಟುಮೀರದಂತೆನೌಕರರನ್ನು6ನೇವೇತನಆಯೋಗದವ್ಯಾಪ್ತಿಗೆಒಳಪಡುವಂತೆಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ನಿಧಿಯಿಂದ ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಸಚಿವರು ಹೇಳಿದರು.

ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಅಧಿಸೂಚಿತ ಸಂಸ್ಥೆಗಳಲ್ಲಿ ದೇವಾಲಯದ ಸೇವೆಗಳ ಬಗ್ಗೆ ವಿವರ, ದೇಗುಲದ ಸ್ಥಳದ ಮಾಹಿತಿ, ಸ್ಥಿರಾಸ್ತಿಗಳ ವಿವರ, ಆನ್ ಲೈನ್ ಹಾಗೂ ಇ-ಸೇವೆಗಳ ಸೌಲಭ್ಯಗಳನ್ನು ಒಳಗೊಂಡ ಸೇವೆಗೆಳನ್ನು ಭಕ್ತಾಧಿಗಳಿಗೆ ಒದಗಿಸುವ ಸಲುವಾಗಿ ಇಂಟಿಗ್ರೇಟೆಡ್ ಟೆಂಪಲ್ ಮ್ಯಾನೇಜ್ ಮೆಂಟ್ ಸಿಸ್ಟಂ (ಐಟಿಎಂಎಸ್) ತಂತ್ರಾಶವನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಅರ್ಚಕರು ಮತ್ತು ನೌಕರರನ್ನು ವಿಮಾ ಸೌಲಭ್ಯಕ್ಕೆ ಒಳಪಡಿಸಲಾಗುತ್ತಿದೆ. ಇಲಾಖೆಯ ಅರ್ಚಕರು ಮತ್ತು ಸಿಬ್ಬಂದಿಗೆ ಆರೋಗ್ಯ ವಿಮೆ ಹಾಗೂ ಅಪಘಾತ ಪರಿಹಾರ ವಿಮೆ ಒದಗಿಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ನ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಕೋವಿಡ್-19 ಮೂರನೇ ಅಲೆ ಮಕ್ಕಳಿಗೆ ಬಾಧಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಕೊರೋನಾ ಎಂಬ ದುಷ್ಟ ಶಕ್ತಿಯಿಂದ ಮಕ್ಕಳ ಆರೋಗ್ಯ ರಕ್ಷಣೆಗಾಗಿ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ದೇಗುಲಗಳಲ್ಲಿ ಆಕ್ಟೋಬರ್ 15 ರಂದು ವಿಜಯದಶಮಿ ದಿನದಂದು ವಿಶೇಷ ಪೂಜೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು