ಅರ್ನಾಬ್ ಗೋಸ್ವಾಮಿಗೆ ಬಿಗ್ ರಿಲೀಫ್!

arnab
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ(07/11/2020): ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಟಿ.ವಿ. ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯವರಿಗೆ ಕೊನೆಗೂ ಜಾಮೀನು ದೊರೆತಿದೆ.

ಅವರು ಮಧ್ಯಂತರ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ರಜೆ ಕಾಲದ ನ್ಯಾಯಪೀಠವು ಅರ್ನಾಬ್ ಗೋಸ್ವಾಮಿಯವರಿಗೆ ಮಧ್ಯಂತರ ಜಾಮೀನು ನೀಡಿದೆ.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಎಂಬವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅರ್ನಾಬ್ ಗೋಸ್ವಾಮಿಯವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಅನ್ವಯ್ ನಾಯಕ್ ಅವರು ಅರ್ನಾಬ್ ಗೋಸ್ವಾಮಿ ಮೋಸ ಮಾಡಿರುವುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು