ಮುಂಬೈ(04/11/2020): ‘ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ’ ಎಂದು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಸಮರ್ಥಿಸುತ್ತಾ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಮಹಾರಾಷ್ಟ್ರ ಪೊಲೀಸರು ಕಾನೂನಿನ ಅಡಿಯಲ್ಲಿಯೇ ಕಾರ್ಯನಿರ್ವಹಿಸಲಿದ್ದಾರೆ’ ಎಂದಿದ್ದಾರೆ.
ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಇಂದು ವಶಕ್ಕೆ ಪಡೆದುಕೊಂಡಿದೆ.