ಟಿಆರ್‌ಪಿ ಹಗರಣ; ಬಲಪಂಥೀಯ ಪತ್ರಕರ್ತ ಅರ್ನಬ್ ವಿರುದ್ಧ ಮಹತ್ವದ ಸಾಕ್ಷಿಗಳು ಪತ್ತೆಹಚ್ಚಿದ ಮುಂಬೈ ಪೊಲೀಸರು!

arnab
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ(06-01-2021): ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಮುಂಬೈ ಪೊಲೀಸರು ಬುಧವಾರ ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಯಾವುದೇ ಬಲವಂತದ ಕ್ರಮದಿಂದ ಗೋಸ್ವಾಮಿಗೆ ರಕ್ಷಣೆ ನೀಡುವುದನ್ನು ಮುಂದುವರಿಸಬಾರದು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ, ಆದರೆ, ಹೈಕೋರ್ಟ್ ಈ ವಿಷಯವನ್ನು ಯಾವುದೇ ವಾದಗಳನ್ನು ಕೇಳದೆ ಮುಂದೂಡಿದೆ.

ಟಿವಿ ಚಾನೆಲ್‌ಗಳು ತಮ್ಮ ಜಾಹೀರಾತು ಆದಾಯವನ್ನು ಹೆಚ್ಚಿಸಿಕೊಳ್ಳಲು ಟಿಆರ್‌ಪಿ ಸಂಖ್ಯೆಯನ್ನು ಅಡ್ಡದಾರಿಯಲ್ಲಿ ಹೆಚ್ಚಿಸಿಕೊಳ್ಳುತ್ತಿವೆ ಎಂದು ಆರೋಪಿಸಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ದೂರು ಸಲ್ಲಿಸಿತ್ತು. ಆ ಬಳಿಕ ತನಿಖೆ ನಡೆದು ನಕಲಿ ಟಿಆರ್‌ಪಿ ಹಗರಣವನ್ನು ಪತ್ತೆ ಮಾಡಲಾಗಿದೆ.

ಹಿರಿಯ ವಕೀಲ ಹರೀಶ್ ಸಾಳ್ವೆ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಮತ್ತೊಬ್ಬ ಹಿರಿಯ ವಕೀಲರು ಸಹ ಕುಟುಂಬದ ಗಂಭೀರ ಆರೋಗ್ಯ ಸಮಸ್ಯೆಯಲ್ಲಿ ಸಿಲುಕಿದ್ದು ನ್ಯಾಯಾಲಯಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ರಿಪಬ್ಲಿಕ್ ಟಿವಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ ಬಳಿಕ ಪ್ರಕರಣದ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಯ್ತು.

ರಿಪಬ್ಲಿಕ್ ಟಿವಿ ಮತ್ತು ಅರ್ನಬ್ ಗೋಸ್ವಾಮಿ ವಿರುದ್ಧ ಬಾರ್ಕ್ ದಾಖಲಿಸಿದ ಪ್ರಕರಣದ ತನಿಖೆಯಲ್ಲಿ ಮುಂಬೈ ಪೊಲೀಸರು ಸಾಕ್ಷ್ಯಗಳನ್ನು ಪತ್ತೆಹಚ್ಚಿದ್ದಾರೆ ಎಂದು ಕೋರ್ಟ್ ಗೆ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು