ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ವೈದ್ಯಕೀಯ ವೆಚ್ಚ ಸರ್ಕಾರ ಮರು ಪಾವತಿಸಬೇಕು: ಪ್ರಿಯಾಂಕ್ ಖರ್ಗೆ ಒತ್ತಾಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಲಬುರ್ಗಿ: ತಮ್ಮ ಕುಟುಂಬದ ಯೋಗಕ್ಷೇಮವನ್ನೂ ಲೆಕ್ಕಿಸದೇ, ದಿನವಿಡೀ ಸೋಂಕಿತರ ಆರೈಕೆ ಮಾಡುತ್ತಿರುವ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೈದ್ಯಕೀಯ ವೆಚ್ಚವನ್ನು ಭರಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರಿಗೆ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು,
ಕೊರೋನಾ ಸಾಂಕ್ರಾಮಿಕವು ರಾಜ್ಯವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ದಿನಂಪ್ರತಿ ಸಾವಿರಾರು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಈ ಸಮಯದಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳು ಹಾಗೂ ಡಿ ಗ್ರೂಪ್ ನೌಕರರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಸೋಂಕಿತರ ಆರೈಕೆ ಮಾಡುತ್ತಿದ್ದಾರೆ.
ಇಂಥ ಸಂಕಷ್ಟದ ಪರಿಸ್ಥಿತಿಯಲ್ಲಿ ಡಿ ಗ್ರೂಪ್ ನೌಕರರಿಗೆ ಕಡೆಗಣಿಸಬಾರದು ಎಂದು ತಿಳಿಸಿದ್ದಾರೆ.

ಡಿ ಗ್ರೂಪ್ ನೌಕರರಲ್ಲಿ ಹಲವರು ಕೊರೋನಾ ಸೋಂಕಿಗೆ ಒಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇವರಿಗೆ ಗುತ್ತಿಗೆ ಆಧಾರದ ನೆಪವೊಡ್ಡಿ ವೈದ್ಯಕೀಯ ವೆಚ್ಚವನ್ನು ರಾಜ್ಯ ಸರ್ಕಾರವು ಮರುಪಾವತಿಸದೇ ಅನ್ಯಾಯವೆಸಗುತ್ತಿದೆ. ಎಲ್ಲಾ ಗುತ್ತಿಗೆ ನೌಕರರ ಸಂಪೂರ್ಣ ವೆಚ್ಚವನ್ನು ಕೂಡಲೇ ಸರ್ಕಾರ ಭರಿಸಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸರಕಾರಕ್ಕೆ ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು