ಆರ್ಟಿಕಲ್ 370 ರದ್ದು ಹೇಳಿಕೆ ವಿಚಾರ: ಬಿಜೆಪಿಗರ ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ್ ಸಿಂಗ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಆರ್ಟಿಕಲ್ – 370 ರದ್ದು ಹಾಗೂ ಜಮ್ಮು-ಕಾಶ್ಮೀರದ ಕುರಿತು ‘ಕ್ಲಬ್ ಹೌಸ್’ ಎಂಬ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ.

‘ಆರ್ಟಿಕಲ್ 370 ರದ್ದುಗೊಳಿಸಿರುವುದು ಹಾಗೂ ಜಮ್ಮು-ಕಾಶ್ಮೀರದ ರಾಜ್ಯದ ಸ್ಥಾನವನ್ನು ಕಸಿದು ಕೇಂದ್ರಾಡಳಿತ ಪ್ರದೇಶ ವನ್ನಾಗಿ ಮಾಡಿರುವುದು ಬೇಸರದ ನಿರ್ಧಾರ. ಮೋದಿ ಸರ್ಕಾರದ ಅವಧಿ ಮುಗಿದು ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ವಿಷಯವಾಗಿ ಮರುಪರಿಶೀಲನೆ ನಡೆಸುವುದಾಗಿ ಹೇಳಿರುವುದು’ ದಿಗ್ವಿಜಯ್ ಸಿಂಗ್ ಅವರ ಹೇಳಿಕೆ ರಾಷ್ಟ್ರೀಯತೆ ಪ್ರತಿಪಾದಿಸುವವರ ಕೆಂಗಣ್ಣಿಗೆ ಗುರಿಯಾಗಿದೆ.

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ದಿಗ್ವಿಜಯ್ ಸಿಂಗ್ ಭಾರತದ ವಿರೋಧಿಯಾಗಿದ್ದು, ಪಾಕಿಸ್ತಾನದ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದೆ. ಕ್ಲಬ್ ಹೌಸ್ ನಲ್ಲಿ ದಿಗ್ವಿಜಯ ಯಾರೊಂದಿಗೆ ಚರ್ಚಿಸುತ್ತಿದ್ದರೋ ಅವರು ಪಾಕಿಸ್ತಾನಿ ಮೂಲದ ಪತ್ರಕರ್ತ ಎಂದು ಬಿಜೆಪಿ ಆರೋಪಿಸಿದೆ,

ದಿಗ್ವಿಜಯ್ ಸಿಂಗ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ, ಈ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸ್ಪಷ್ಟನೆ ನೀಡಬೇಕೆಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆಗ್ರಹಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು