ಅಸ್ಸಾಂ(13-11-2020): ಪತ್ರಕರ್ತ ಪರಾಗ್ ಭುಯಾನ್ ಸಾವು ಅಪಘಾತವಲ್ಲ, ಅದೊಂದು ವ್ಯವಸ್ಥಿತವಾದ ಕೊಲೆ ಎಂದು ಅಸ್ಸಾಂ ಸ್ಥಳೀಯ ಚಾನಲ್ ಮುಖ್ಯಸ್ಥರು ಗಂಭೀರವಾದ ಆರೋಪವನ್ನು ಮಾಡಿದ್ದಾರೆ.
ಬುಧವಾರ ರಾತ್ರಿ ಭುಯಾನ್ ವಾಹನಕ್ಕೆ ಅವರ ಮನೆಯ ಪಕ್ಕದಲ್ಲೇ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಪರಾಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಅಸ್ಸಾಂನ ತಿನ್ಸುಕಿಯ ಜಿಲ್ಲೆಯಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮ ಚಟುವಟಿಕೆಗಳನ್ನು ಬಯಲು ಮಾಡಿದ್ದಕ್ಕಾಗಿ ಪತ್ರಕರ್ತ ಪರಾಗ್ ಭುಯಾನ್ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಚಾನೆಲ್ ಮುಖ್ಯಸ್ಥರೋರ್ವರ ಹೇಳಿಕೆಯ ಬೆನ್ನಲ್ಲೇ ಪ್ರಕರಣವನ್ನು ಸಿಐಡಿ ತನಿಖೆಗೆ ಅಸ್ಸಾಂ ಸಿಎಂ ಆದೇಶಿಸಿದ್ದಾರೆ.