ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಆಯ್ಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಗುವಾಹಟಿ: ಅಸ್ಸಾಂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

ಅಸ್ಸಾಂ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು? ಎನ್ನುವ ಗೊಂದಲ ಹಾಗೂ ಕುತೂಹಲ ಮೂಡಿಸಿತ್ತು, ಇದರ ನಡುವೆ ಗುವಾಹಟಿಯಲ್ಲಿ ಇಂದು ಮಧ್ಯಾಹ್ನ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಇಂದು ಮುಂಜಾನೆ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 2016ರ ಚುನಾವಣೆಯಲ್ಲಿ ಸೋನೊವಾಲ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದ ಬಿಜೆಪಿ, ಅಧಿಕಾರಕ್ಕೆ ಬಂದಿತ್ತು. 126 ಸದಸ್ಯಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ 60 ಕ್ಷೇತ್ರಗಳಲ್ಲಿ ಹಾಗೂ ಮಿತ್ರಪಕ್ಷಗಳಾದ ಎಜಿಪಿ 9 ಕ್ಷೇತ್ರಗಳಲ್ಲಿ, ಯುಪಿಪಿಎಲ್ 6 ಕ್ಷೇತ್ರಗಳಲ್ಲಿ ಜಯ ಸಾಧಿಸಿವೆ.

ಈಗ ಪ್ರಬಲ ನಾಯಕ ಹಿಮಂತ ಬಿಸ್ವಾ ಶರ್ಮಾ ಅವರು ಅಸ್ಸಾಂನ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ, ನಾಳೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು