ನವದೆಹಲಿ(27-02-2021): ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ಸೇರಿ ಪಂಚರಾಜ್ಯಗಳಲ್ಲಿ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, ಈ ಬಾರಿ ಆನ್ ಲೈನ್ ಮೂಲಕವೂ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಮಾರ್ಚ್ 27 ರಿಂದ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.
ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29 ರಂದು ಬಂಗಾಳ ಸೇರಿ ಎಂಟು ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 6 ರಂದು ತಮಿಳುನಾಡು ಮತ್ತು ಕೇರಳದಲ್ಲಿ ಒಂದೇ ಸುತ್ತಿನಲ್ಲಿ ಮತದಾನ ನಡೆಯಲಿದೆ. ಪುದುಚೇರಿಯಲ್ಲಿಯೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಈ ಬಾರಿ ಅಭ್ಯರ್ಥಿಗಳು ನಾಮಪತ್ರಗಳನ್ನು ಆನ್ಲೈನ್ ಮೂಲಕವೂ ಸಲ್ಲಿಸಬಹುದಾಗಿದೆ. ಕೋವಿಡ್-19 ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಒಂದು ಗಂಟೆ ಹೆಚ್ಚು ಕಾಲ ಮತದಾನಕ್ಕೆ ಅನುಮತಿ ನೀಡಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಮಾಹಿತಿ ನೀಡಿದ್ದಾರೆ.