ಅತ್ಯಾಚಾರ ಆರೋಪಿಯನ್ನು ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು : ಕಾಂಗ್ರೆಸ್ ಟೀಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಸಿಡಿ ಪ್ರಕರಣದ ಆರೋಪಿಯೊಬ್ಬನನ್ನು ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ ಈ ಸರ್ಕಾರಕ್ಕೆ ಸಲ್ಲಬೇಕು. ಅತ್ಯಾಚಾರ ಆರೋಪಿಯನ್ನು ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು ಎಂದು ಕಾಂಗ್ರೆಸ್ ಬಿಜೆಪಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್ ಸಮರ ಮುಂದುರೆಸಿದ ಕಾಂಗ್ರೆಸ್ ಸಿಡಿ ಕೇಸ್ ಪ್ರಕರಣದಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದೆ. “ಸಂತ್ರಸ್ತ ಯುವತಿ ಹಾಜರಾದ ದಿನದಿಂದಲೂ ಆರೋಪಿ ತಲೆಮರೆಸಿಕೊಂಡಿದ್ದಾರೆ, ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎನ್ನುವುದು ತಿಳಿದಿಲ್ಲ. ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು. ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ” ಎಂದು ಕಾಂಗ್ರೆಸ್ ಆರೋಪಿಸಿದೆ.

 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತೆ ಟ್ವಿಟ್ಟರ್ ಮೂಲಕ ಬಿಜೆಪಿಯನ್ನು ಟೀಕಿಸಿದೆ “ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ, ಅತ್ಯಾಚಾರ ಆರೋಪಿಯದ್ದು ತಪ್ಪಿಲ್ಲ, ಷಡ್ಯಂತ್ರ ನಡೆಸಲಾಗಿದೆ ಎಂದು ಹೇಳಿದ್ದೀರಿ, ನಿಮಗೆ ಹೇಗೆ ಅದು ಷಡ್ಯಂತ್ರ ಎನಿಸಿತು, ತಮ್ಮಲ್ಲಿ ಅದಕ್ಕಿರುವ ಸಾಕ್ಷ್ಯಗಳೇನು ಎನ್ನುವುದನ್ನ ತಾವೂ SIT ಮುಂದೆ ಹಾಜರಾಗಿ ತಿಳಿಸಿಬಿಡಿ ಸ್ವಾಮಿ! ಪ್ರಕರಣ ಇತ್ಯರ್ಥವಾಗಿಬಿಡಲಿ” ಎಂದು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು