ಯೋಗಿ ರಾಜ್ಯದಲ್ಲಿ ಸೈನಿಕರೂ ಸೇಫ್ ಅಲ್ಲ? ಮಾಜಿ ಸೈನಿಕನ ಮನೆಗೆ ನುಗ್ಗಿ ಗೂಂಡಾಗಿರಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(09-10-2020): ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಿಂದ ವರದಿಯಾದ ಆಘಾತಕಾರಿ ಘಟನೆಯಲ್ಲಿ, ನಿವೃತ್ತ ಸೈನಿಕ ಮತ್ತು ಅವರ ಕುಟುಂಬದ ಸದಸ್ಯರನ್ನು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಗೂಂಡಾಗಳು ಕ್ರೂರವಾಗಿ ಥಳಿಸಿದ್ದಾರೆ.

ಕೋಲುಗಳು ಮತ್ತು ಕಬ್ಬಿಣದ ಸರಳುಗಳಿಂದ ಶಸ್ತ್ರಸಜ್ಜಿತವಾದ ಕೆಲವು ಅಪರಿಚಿತ ಯುವಕರು ಮಾಜಿ ಸೈನಿಕನ ಮನೆಗೆ ನುಗ್ಗಿ  ಹಲ್ಲೆ ನಡೆಸಿದ್ದಾರೆ.

ಗೂಂಡಾಗಳು ಕುಟುಂಬದ ಮಹಿಳಾ ಸದಸ್ಯರ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಕೂಡ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ವೈರಲ್ ಆಗಿದೆ

ಈ ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸಿಲ್ಲ. ದಾಳಿಕೋರರನ್ನು ಇನ್ನೂ ಗುರುತಿಸಲಾಗಿಲ್ಲ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು