ಅತ್ಯಾಚಾರ ಆರೋಪಿಯನ್ನು ಯಾಕೆ ಬಂಧಿಸಲಿಲ್ಲ ಬೊಮ್ಮಾಯಿ ಅವರೇ? : ಕಾಂಗ್ರೆಸ್ ಪ್ರಶ್ನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಎಸ್ಐಟಿ ತಂಡ ಸಿಡಿ ಯುವತಿಯನ್ನು ವಿಚಾರಣೆಗೆ ಒಳಪಡಿಸಿದೆ. ನನಗೆ ಜೀವ ಬೆದರಿಕೆ ಇದೆ ಎಂದು ಸಂತ್ರಸ್ತೆ ಯುವತಿ ಹೇಳಿದ್ದಾಳೆ.

ಸಿಡಿ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ – ಬಿಜೆಪಿ ಮಧ್ಯೆ ಟ್ವಿಟ್ಟರ್ ವಾರ್ ನಡೆಯುತ್ತಿದೆ. ಕಾಂಗ್ರೆಸ್ ತನ್ನ ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ಪಕ್ಷದ ನಾಯಕರಿಗೆ ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸುತ್ತಿದೆ. ಈ ಕುರಿತು ಟ್ವೀಟ್ ಮಾಡಿದ ಕಾಂಗ್ರೆಸ್ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದೆ

“ಸಂತ್ರಸ್ತೆ ನಿರ್ಭಿತಿಯಿಂದ, ಯಾವುದೇ ಪ್ರಭಾವಕ್ಕೂ ಒಳಗಾಗದೆ, ಯಾವುದೇ ಅಂಜಿಕೆಯಿಲ್ಲದೆ, ಒತ್ತಡವಿಲ್ಲದೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾಳೆ ಎಂದು ಆಕೆಯ ವಕೀಲರು ತಿಳಿಸಿದ್ದಾರೆ.
ಸಂತ್ರಸ್ತೆ ಕೋರ್ಟಿಗೆ ಬಂದು ಹೇಳಿಕೆ ನೀಡಿದ ಮೇಲೂ ಅತ್ಯಾಚಾರ ಆರೋಪಿಯ ಬಂಧನವಾಗಲಿಲ್ಲವೆಂದರೆ ಏನರ್ಥ ಬೊಮ್ಮಾಯಿ ಅವರೇ?” ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

‘ಯುವತಿ ವಿಡಿಯೋ ಹೇಳಿಕೆ ನೀಡಿದಾಗಲೂ ಕೇಸ್ ಹಾಕಲಿಲ್ಲ. ಸಂತ್ರಸ್ತೆ ದೂರು ಸಲ್ಲಿಸಿ, ಎಫ್ಐಆರ್ ದಾಖಲಾದರೂ ಬಂಧಿಸಲಿಲ್ಲ. ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡಿದರೂ ಬಂಧನವಿಲ್ಲ. ಇಷ್ಟಾದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದಂತೆ ಯಾವ ಶಕ್ತಿ ತಡೆಯುತ್ತಿದೆ? ಜನತೆಗೆ ಕಾನೂನಿನ ಮೇಲಿದ್ದ ನಂಬಿಕೆಯನ್ನೇಕೆ ನಾಶಗೊಳಿಸುತ್ತಿದ್ದೀರಿ?
ಸಂತ್ರಸ್ತೆ ಬಂದು ನ್ಯಾಯಾಧೀಶರೆದುರು ಹೇಳಿಕೆಯನ್ನೂ ಕೊಟ್ಟಾಯಿತು.ಇಷ್ಟಾದರೂ ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಬೀದಿ ಗೂಳಿಯಂತೆ ತಿರುಗಿಕೊಂಡಿದ್ದಾರೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ಸಂತ್ರಸ್ತೆ ನನಗೆ ಜೀವ ಬೆದರಿಕೆ ಇದೆ ಎಂದಿದ್ದಾಳೆ. ಸಂತ್ರಸ್ತೆ ಪರ ವಕೀಲರು ನಮಗೂ ಬೆದರಿಕೆ ಇದೆ ಎಂದಿದ್ದಾರೆ. ಆರೋಪಿ ಪ್ರಭಾವಿಯಾದ ಕಾರಣ ಪ್ರಕರಣದಲ್ಲಿ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ. ದಿನೇಶ್ ಕಲ್ಲಹಳ್ಳಿ ಕೊಟ್ಟ ದೂರನ್ನು ವಾಪಸ್ ಪಡೆದ ಘಟನೆ ಇದೆಲ್ಲದಕ್ಕೂ ಪುಷ್ಠಿ ಕೊಡುತ್ತದೆ. ಆದರೂ ಆರೋಪಿಯನ್ನು ಯಾಕೆ ಬಂಧಿಸಲಿಲ್ಲ ಎಂದು ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು