ಮಂಗಳೂರಿನಲ್ಲಿ ಮೃತಪಟ್ಟಿದ್ದ ವ್ಯಕ್ತಿ ಉಪ್ಪಳ ತಲುಪಿದಾಗ ಜೀವಂತ

ಬದಿಯಡ್ಕ ನಿವಾಸಿಯೋರ್ವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದು ಮೃತಪಟ್ಟಿದ್ದಾರೆ ಎಂದು ಖಚಿತ ಪಡಿಸಿ ಮನೆಯವರಿಗೆ ಬಿಟ್ಟು ಕೊಟ್ಟಿದ್ದು, ಆ ವ್ಯಕ್ತಿಯು ಮಾರ್ಗ ಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ನಡೆದಿದೆ. ತೀವ್ರ ಅಸೌಖ್ಯದ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರಾದ ಗುರುವ (60) ಎಂಬವರನ್ನು ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿಯು ಆಕ್ಸಿಜನ್ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ತೆಗೆದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್ ತೆರವುಗೊಳಿಸಲಾಗಿತ್ತು. ಬಳಿಕ ಮನೆಗೆ … Read more

ವಿಟ್ಲ: ಪ.ಪಂಚಾಯತ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ವಿಟ್ಲ: ಡೆತ್ ನೋಟು ಬರೆದಿಟ್ಟು ಪಟ್ಟಣ ಪಂಚಾಯತ್ ಸಿಬ್ಬಂದಿ ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ರಾಜೇಶ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರು. ವಿಟ್ಲದ ಮಂಗಳಪದವು ಎಂಬಲ್ಲಿಯ ವ್ಯಕ್ತಿಯೊಬ್ಬರಿಗೆ ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ರಾಜೇಶ್ ಅವರ ಮೇಲೆ ಲಂಚದ ಅರೋಪ ಮಾಡಿದ್ದಾರೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಭಾರತೀಯ ಪ್ರಜೆಯನ್ನು ಅಪಹರಿಸಿದ ಚೀನಾ

ನವದೆಹಲಿ: ಭಾರತೀಯ ಪ್ರಜೆಯನ್ನು ಬೋರ್ಡರ್ ನಲ್ಲಿ ಚೀನಾ ಅಪಹರಿಸಿರುವ ಬಗ್ಗೆ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅರುಣಾಚಲ ಪ್ರದೇಶದ 17 ವರ್ಷದ ಮಿರಾಮ್ ಟ್ಯಾರೋನ್ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಅಪಹರಿಸಿದೆ. ಯುವಕರ ತಂಡ ಬೇಟೆಯಾಡುತ್ತಿದ್ದಾಗ ಬೇಟೆಗಾರರ ಗುಂಪಿನಲ್ಲಿದ್ದ ಮಿರಾಮ್ ಟ್ಯಾರೋನ್ ನನ್ನು ಅಪಹರಿಸಿರುವ ಬಗ್ಗೆ ಜಿಲ್ಲಾ ಅಧಿಕಾರಿಗಳು ದೃಢಪಡಿಸಿದ್ದಾರೆ.. ನಾವು ವಿಷಯ ತಿಳಿದ ತಕ್ಷಣ, ನಾವು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸೇನೆಯ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಆದಷ್ಟು ಬೇಗ ಯುವಕರನ್ನು ರಕ್ಷಿಸಲು ನಿರಂತರ … Read more

ಕೋವಿಡ್ ಭೀತಿ: ಮುಚ್ಚಲ್ಪಟ್ಟ ಶಾಲೆಗಳನ್ನು ತೆರೆಯಲು ಜ.21ರ ತಜ್ಞರ ಸಭೆಯಲ್ಲಿ ತೀರ್ಮಾನ; ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: `ಕೋವಿಡ್ ರೂಪಾಂತರಿ ಒಮೈಕ್ರಾನ್ ಸೋಂಕು ದೃಢ ಪ್ರಮಾಣ ಹೆಚ್ಚಿರುವುದರಿಂದ ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಮುಚ್ಚಲ್ಪಟ್ಟಿದ್ದ ಶಾಲೆಗಳನ್ನು ಪುನರಾರಂಭಿಸುವ ಕುರಿತು ಶುಕ್ರವಾರ(ಜ.21) ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿರುವ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಂದಿಲ್ಲಿ ತಿಳಿಸಿದ್ದಾರೆ. ಬುಧವಾರ ಇಲ್ಲಿನ ಶಾಸಕರ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಕೋವಿಡ್ ಸೋಂಕು ಕೆಲ ದಿನಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಶಾಲೆಗಳನ್ನು ಬಂದ್ ಮಾಡಲಾಗಿತ್ತು. … Read more

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ

ಮೈಸೂರು: ಜನರ ಜೀವನ, ಜೀವ ಎರಡೂ ಮುಖ್ಯ. ಜೀವ ಉಳಿಸಿಕೊಳ್ಳಲು ವ್ಯಾಕ್ಸಿನ್ ನೀಡಲಾಗಿದೆ‌. ಜೀವನ ಉಳಿಯಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆರವುಗೊಳಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ. ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು? ಈಗಾಗಲೇ ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ಜಾಥಾಗಳನ್ನು ಮಾಡಲಾಗುತ್ತದೆ. ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತ ಜನರನ್ಮು ಸಂಕಷ್ಟಕ್ಕೀಡು ಮಾಡಬೇಕು ಎಂದು ಅವರು ತಮ್ಮದೇ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ಜನ … Read more

ಉತ್ತರ ಪ್ರದೇಶ: ಬಿಜೆಪಿ ಪ್ರಚಾರಕರ ಪಟ್ಟಿಯಲ್ಲಿ ಮೇನಕಾ, ವರುಣ್ ಗಾಂಧಿಗೆ ಸ್ಥಾನವಿಲ್ಲ

ಲಕ್ನೊ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ಸ್ಟಾರ್ ಪ್ರಚಾರಕರು ಪಟ್ಟಿಯಲ್ಲಿದ್ದರೆ, ಪಕ್ಷದ ಸಂಸದರು ಹಾಗೂ ತಾಯಿ-ಮಗ ಜೋಡಿಯಾದ ಮೇನಕಾ ಗಾಂಧಿ ಹಾಗೂ ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಇವರಿಬ್ಬರು ಸುಲ್ತಾನ್‌ಪುರ ಹಾಗೂ ಪಿಲಿಭಿತ್‌ ಲೋಕಸಭಾ ಕ್ಷೇತ್ರದಿಂದ ಹಲವು ಬಾರಿ ವಿಜಯಶಾಲಿಯಾಗಿದ್ದಾರೆ. ಇತ್ತೀಚೆಗಷ್ಟೇ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ … Read more

ಹಾಸನ: ಶಾಲೆಗಳಿಗೆ ರಜೆ ಘೋಷಣೆ

ಹಾಸನ : ಜಿಲ್ಲೆಯಲ್ಲಿ ಕೊರೊನಾ ಮಹಾಸ್ಪೋಟವಾಗಿದ್ದು, ಈ ಹಿನ್ನೆಲೆ ಹಾಸನ ಜಿಲ್ಲೆಯಲ್ಲಿ 1 ರಿಂದ 9 ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಸನ, ಆಲೂರು ತಾಲೂಕಿನಲ್ಲಿ ಮೂರು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 1 ರಿಂದ 9 ನೇ ತರಗತಿವರೆಗಿನ ಶಾಲೆಗಳಿಗೆ ರಜೆ ನೀಡಲಾಗಿದೆ. ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಹೊಸದಾಗಿ 41,457 ಮಂದಿಗೆ ಕೊರೋನಾ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದ 20 ಮಂದಿ ಸಾವನ್ನಪ್ಪಿದ್ದಾರೆ.ಈ … Read more

ಸಂಕ್ರಾಂತಿ ದುರಂತ: ಪ್ರಾಣಿ ಬದಲು ಮದ್ಯದ ಮತ್ತಿನಲ್ಲಿ ಮೇಕೆ ತಲೆ ಹಿಡಿದಿದ್ದ ವ್ಯಕ್ತಿಯನ್ನು ಬಲಿ ಕೊಟ್ಟ ಕುಡುಕ!

ವಿಜಯವಾಡ: ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಪ್ರಾಣಿಯನ್ನು ಬಲಿ ಕೊಡುವ ಬದಲು ಮನುಷ್ಯನ ಕುತ್ತಿಗೆಯನ್ನು ಕುಯ್ದಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಾನುವಾರ (ಜ.16) ನಡೆದಿದೆ. ಸಂಕ್ರಾಂತಿ ಸಂಭ್ರದಮ ನಡುವೆ ಈ ಘಟನೆ ನಡೆದಿದೆ. ಚಲಪತಿ ಎಂಬಾತ ದೇವರಿಗೆ ಮೇಕೆಯನ್ನು ಬಲಿ ಕೊಡಲು ಮುಂದಾಗಿದ್ದ. ಆದರೆ, ತುಂಬಾ ಮದ್ಯ ಸೇವಿಸಿದ್ದರಿಂದ ಮೇಕೆಯನ್ನು ಹಿಡಿದುಕೊಂಡಿದ್ದ ಸುರೇಶ್​ ಎಂಬಾತನ ಕುತ್ತಿಗೆಯನ್ನು ಕುಯ್ದಿದ್ದಾನೆ. ಸ್ಥಳೀಯ ಎಲ್ಲಮ್ಮ ದೇವಸ್ಥಾನದಲ್ಲಿ ಪ್ರಾಣಿ ಬಲಿಯನ್ನು ಆಯೋಜಿಸಲಾಗಿತ್ತು. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಸುರೇಶ್​ನನ್ನು ಮದನಪಲ್ಲಿ ಸರ್ಕಾರಿ ಆಸ್ಪತ್ರೆಗೆ … Read more

ಮಂಗಳೂರು: ಗಿಫ್ಟ್ ಹೆಸರಿನಲ್ಲಿ ಲಕ್ಷ ಲಕ್ಷ ವಂಚನೆ

ಮಂಗಳೂರು: ಅಪರಿಚಿತನೋರ್ವ ಮನೆ ಕಟ್ಟಲು ಹಣ ಮತ್ತು ಗಿಫ್ಟ್ ನೀಡುವುದಾಗಿ ನಂಬಿಸಿ 2.92 ಲಕ್ಷ ರೂ.ವನ್ನು ತನ್ನ ಖಾತೆಗೆ ಜಮೆ ಮಾಡಿಸಿಕೊಂಡು ವಂಚಿಸಿದ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆನರಾ ಬ್ಯಾಂಕ್‌ನ ಕೂಳೂರು ಶಾಖೆಯಲ್ಲಿ ವ್ಯಕ್ತಿ ಖಾತೆಯನ್ನು ಹೊಂದಿದ್ದು, ಸೆ.20ರಂದು ಈ ವ್ಯಕ್ತಿಯ ಮೊಬೈಲ್‌ಗೆ ಬಂದ ವಾಟ್ಸಾಪ್ ಸಂದೇಶದಲ್ಲಿ ಮನೆ ಕಟ್ಟಲು ಹಣ ಮತ್ತು ಗಿಫ್ಟ್ ನೀಡುವುದಾಗಿ ತಿಳಿಸಲಾಗಿತ್ತು. ಆ ಬಳಿಕ ಅಪರಿಚಿತನು ಆಗಾಗ ಸಂದೇಶ ಕಳುಹಿಸಿ ವ್ಯಕ್ತಿಯ ವಿಶ್ವಾಸ ಗಳಿಸಿದ್ದ. ಅ.5ರಂದು … Read more

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಮೃತ್ಯು ಪ್ರಕರಣ; ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಧಡಾರ್ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ … Read more