ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿಯಲ್ಲಿ ಕೋವಿಡ್ ಚಿಕಿತ್ಸೆಗೆ ಅವಕಾಶ ನೀಡಬೇಕು: ಎಚ್.ಡಿ.ಕುಮಾರಸ್ವಾಮಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು.‌ ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಯೋಜನೆ ವ್ಯಾಪ್ತಿಗೆ ಕೋವಿಡ್ ಅನ್ನೂ ಸೇರಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಎಚ್.ಡಿ.ಕೆ. ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು