ಲಖನೌ(17/10/2020): ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 32 ಆರೋಪಿಗಳನ್ನು ದೋಷಮುಕ್ತಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯವು ನೀಡಿದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿದೆ.
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ; ಸಿಬಿಐ ವಿಶೇಷ ನ್ಯಾಯಾಲಯವು ಬಾಬರೀ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಆರೋಪ ಮುಕ್ತಗೊಳಿಸಿರುವುದು ದುರಾದೃಷ್ಟಕರ ಎಂದು ಅಭಿಪ್ರಾಯ ವ್ಯಕ್ತವಾಗಿರುವುದಾಗಿ ವರದಿಯಾಗಿದೆ.
ಆದ್ದರಿಂದ ಸಿಬಿಐ ತೀರ್ಪಿನ ವಿರುದ್ಧ ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ.