ನವದೆಹಲಿ(05-12-2020): ಅಯೋಧ್ಯೆ ಇಂಡೋ ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಷನ್ ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ನಾಮನಿರ್ದೇಶನಕ್ಕೆ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ವಕೀಲರಾದ ಶಿಶಿರ್ ಚತುರ್ವೇದಿ ಹಾಗೂ ಕೆಕೆ ಶುಕ್ಲಾ ಅವರು ಸಲ್ಲಿಸಿದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ಮತ್ತು ನ್ಯಾಯಮೂರ್ತಿ ಕೆಎಂ ಜೋಸೆಫ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿದೆ.
ಅರ್ಜಿದಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ಮಸೀದಿ ನಿರ್ಮಾಣದ ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಗೆ ಸೇರಿಸುವಂತೆ ಮನವಿ ಮಾಡಿದ್ದರು.