ಬಾದಾಮಿ ಕ್ಷೇತ್ರದ ಜನಸೇವೆಗೆ ಆಂಬುಲೆನ್ಸ್ ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ಕಳುಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೊರೊನಾ ಸೋಂಕು ವ್ಯಾಪಿಸುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದ ರೋಗಿಗಳಿಗೆ ನೆರವಾಗಲು ಇಂದು 3 ಉಚಿತ ಆಂಬುಲೆನ್ಸ್ ವಾಹನಗಳನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸ್ತಾಂತರಿಸಿದ್ದಾರೆ.

ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ತಮ್ಮ ವಿಧಾನಸಭಾ ಕ್ಷೇತ್ರ ಬಾದಾಮಿಯ ಜನಸೇವೆಗೆ ಆಂಬುಲೆನ್ಸ್ ಗಳನ್ನು ತಾಲೂಕು ಆಡಳಿತ ಅಧಿಕಾರಿಗಳಿಗೆ ಹಸ್ತಾಂತರಿಸಿದರು, ಅಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ N95 ಮಾಸ್ಕ್ ಗಳು, ಪಿಪಿಇ ಕಿಟ್ ಗಳನ್ನು ವಿತರಿಸಿದ್ದಾರೆ.

ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಪಕ್ಷದ ವತಿಯಿಂದ ಸಹಾಯವಾಣಿ ಆರಂಭಿಸಲು ಹಾಗೂ ಕೋವಿಡ್ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಳ್ಳುವವರಿಗೆ ಹೆಲ್ಫ್ ಡೆಸ್ಕ್ ಆರಂಭಿಸಲು ಕ್ಷೇತ್ರದ ಮುಖಂಡರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು