ಬೆಂಗಳೂರು : ಕೇಂದ್ರ ಸರ್ಕಾರ 1.80 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದು, ಫಲಾನುಭವಿಗಳಿಗೆ ಶೇ.6 ಬಡ್ಡಿ ದರದಲ್ಲಿ ಸಾಲ ನೀಡಲು ಬ್ಯಾಂಕ್ ಗಳು ಸಮ್ಮತಿ ಸೂಚಿಸಿವೆ ಎಂದು ವಸತಿ ಸಚಿವ ವಿ.ಸೋಮಣ್ಣ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ವಸತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಸುದೀರ್ಘ ಸಭೆ ನಡೆಸಿದ್ದೇನೆ, ಬ್ಯಾಂಕ್ಗಳು ಸಾಲ ನೀಡಲು ಸಮ್ಮತಿ ಸೂಚಿಸಿದ್ದರಿಂದ ವಸತಿ ಸಮಸ್ಯೆ ಬಗೆಹರಿದಿದೆ ಎಂದು ಹೇಳಿದ್ದಾರೆ.
ಕರ್ನಾಟಕ ಗ್ರಹ ನಿರ್ಮಾಣ ಮಂಡಳಿ ಹಾಗೂ ರಾಜೀವ್ ಗಾಂಧಿ ಗ್ರಹ ನಿರ್ಮಾಣ ಮಂಡಳಿ ಅಡಿ ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗೆ ತ್ವರಿತವಾಗಿ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಮಂಜೂರಾತಿ ನೀಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಫಲಾನುಭವಿಗಳಿಗೆ ಬ್ಯಾಂಕುಗಳಿಂದ ದೊರೆಯಬೇಕಾದ 2.25 ಲಕ್ಷ ರೂಪಾಯಿ ಸಾಲವನ್ನು ಶೇ.6% ರ ಬಡ್ಡಿದರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಬಡ್ಡಿ ದರವನ್ನು ಕಡಿಮೆ ಮಾಡಲು ಮುಖ್ಯಮಂತ್ರಿಗಳ ಮೂಲಕ ಕೇಂದ್ರ ವಿತ್ತ ಸಚಿವರನ್ನು ಕೋರಲುಲು ನಿರ್ಧರಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.