ಬಹು ವಿವಾದಿತ ಸಿಎಎ ಜಾರಿ! ಮುಸ್ಲಿಮ್ ಅಲ್ಲದ ನಿರಾಶ್ರಿತರಿಂದ ಅರ್ಜಿ ಸಲ್ಲಿಸಲು ಕೋರಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಬಹು ವಿವಾದಿತ ಪೌರತ್ವ ಕಾಯ್ದೆ(ಸಿಎಎ)ಯನ್ನು ಜಾರಿಗೊಳಿಸಲು ಮುಂದಾಗಿರುವ ಒಕ್ಕೂಟ ಸರಕಾರವು ಮುಸ್ಲಿಂ ಅಲ್ಲದ ನಿರಾಶ್ರಿತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅಫ್ಗಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಮುಸ್ಲಿಮೇತರರು ಪೌರತ್ವ ಕಾಯ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರಥಮ ಹಂತವಾಗಿ ಗುಜರಾತ್‌, ರಾಜಸ್ಥಾನ, ಛತ್ತೀಸಗಡ, ಹರಿಯಾಣ ಮತ್ತು ಪಂಜಾಬ್‌ ರಾಜ್ಯಗಳ 13 ಜಿಲ್ಲೆಗಳಲ್ಲಿ ನೆಲೆಸಿರುವವಿಗೆ ಅವಕಾಶ ನೀಡಲಾಗಿದೆ.

2019 ರಲ್ಲಿ ಕಾಯ್ದೆಯನ್ನು ಜಾರಿಗೆ ತಂದಾಗ ಭಾರೀ ಪ್ರತಿಭಟನೆ ಎದುರಾಗಿತ್ತು. ಬಳಿಕ ಕೋವಿಡ್ ಹಿನ್ನೆಲೆಯಲ್ಲಿ ಕಾಯ್ದೆ ಜಾರಿಗೊಳಿಸುವುದನ್ನು ಮುಂದೂಡಲಾಗಿತ್ತು. ಜೊತೆಗೆ ಸಿಎಎ ವಿರೋಧೀ ಪ್ರತಿಭಟನೆಗಳೂ ನಿಂತಿತ್ತು.

ದೇಶಾದ್ಯಂತ ನಡೆದ ಹಲವು ಚುನಾವಣಾ ರ‍್ಯಾಲಿಗಳಲ್ಲಿ ಸಿಎಎ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದ ಗೃಹ ಸಚಿವ ಅಮಿತ್ ಷಾ, ಕೋವಿಡ್ ಸಾಂಕ್ರಾಮಿಕ ರೋಗವು ಕಡಿಮೆಯಾದರೆ ಸಿಎಎ ಜಾರಿ ಮಾಡುವುದಾಗಿ ಹೇಳುತ್ತಿದ್ದರು.

2014 ಡಿಸೆಂಬರ್ 31 ರೊಳಗೆ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಹಾಗೂ ಕ್ರೈಸ್ತರಿಗೆ ಪೌರತ್ವ ನೀಡುವುದು ಸಿಎಎ ಉದ್ಧೇಶವಾಗಿದೆ. ಧರ್ಮಾಧಾರಿತ ಪೌರತ್ವ ಕಾನೂನುಗಳು ಸಂವಿಧಾನ ವಿರೋಧಿಯಾಗಿದ್ದೆಂದು ಪ್ರಬಲ ವಿರೋಧ ವ್ಯಕ್ತವಾಗುತ್ತಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು