ಇನ್ನೂ ಚಾರ್ಜ್ ಶೀಟ್ ಸಲ್ಲಿಕೆ ಮಾಡದ ಪೊಲೀಸರು- ಗೂಢಚರ್ಯೆ ಆರೋಪದ ಮೇಲೆ ಬಂಧಿತ ರಾಜೀವ್ ಶರ್ಮಾ ರಿಲೀಸ್

rajeev sharma
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(04-12-2020): ಚೀನಾದ ಗುಪ್ತಚರ ಇಲಾಖೆಗೆ ಭಾರತದ ಸೂಕ್ಷ್ಮ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಅಧಿಕೃತ ರಹಸ್ಯ ಕಾಯ್ದೆಯಡಿ ಗೂಢಚರ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಸ್ವತಂತ್ರ ಪತ್ರಕರ್ತ ರಾಜೀವ್ ಶರ್ಮಾ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.

ನ್ಯಾಯಮೂರ್ತಿ ಯೋಗೇಶ್ ಖನ್ನಾ ಅವರ ಪೀಠ ಜಾಮೀನು ನೀಡಿದ್ದು, ಒಂದು ವಾರದೊಳಗೆ ಆರೋಪಿಗಳು ಒಂದು ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ನೀಡಬೇಕೆಂದು ಸೂಚಿಸಿದೆ.

ಬಂಧನಕ್ಕೊಳಗಾದ 60 ದಿನಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಲಾಗಿಲ್ಲ ಎಂಬ ಕಾರಣಕ್ಕೆ ಶರ್ಮಾ ಶಾಸನಬದ್ಧ ಜಾಮೀನು ಕೋರಿದ್ದರು, ಆದರೆ ಈ ಪ್ರಕರಣದಲ್ಲಿ 90 ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸಬಹುದು ಎಂದು ವಿಚಾರಣಾ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು